ಅಹಮದಾಬಾದ್: ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ನಿರ್ಮಾಣ ಮಾಡಲಾಗಿರುವ ʼಏಕತಾ ಪ್ರತಿಮೆ’ 2018 ರಲ್ಲಿ ಉದ್ಘಾಟನೆಯಾದ ನಂತರ ಪ್ರವಾಸಿಗರ ಸಂಖ್ಯೆ 50 ಲಕ್ಷ ಗಡಿ ದಾಟಿದೆ ಎಂದು ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಈ ಏಕತಾ ಪ್ರತಿಮೆ ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿ ಹೊರಹೊಮ್ಮಿದ್ದು, ಎಲ್ಲಾ ವಯಸ್ಸಿನ ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರವಾಗಿದೆ ಎಂದು ಗುಜರಾತ್ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ ಮತ್ತು ಪರಿಸರ) ರಾಜೀವ್ ಗುಪ್ತಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.
182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31, 2018 ರಂದು ಉದ್ಘಾಟಿಸಿದರು. ಅಂದಿನಿಂದ, ದೇಶ ಮತ್ತು ವಿದೇಶಗಳ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಇದನ್ನು ಅತ್ಯಾಧುನಿಕ ಸೌಲಭ್ಯ ಇರುವ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗಿದೆ, ಹಲವಾರು ಆಕರ್ಷಣೆಯನ್ನು ಇಲ್ಲಿಗೆ ಸೇರಿಸಲಾಗಿದೆ.
ಭಾರತದಾದ್ಯಂತ ಕೆವಾಡಿಯಾಕ್ಕೆ ಎಂಟು ರೈಲುಗಳಿಗೆ ಈ ವರ್ಷ ಜನವರಿ 18 ರಂದು ಮೋದಿ ಚಾಲನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.