ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಯಾಗಿರುವ ಕನಿಷ್ಟ ವೇತನ 25 ಸಾವಿರ ರೂ. ವೇತನ ಕುರಿತಂತೆ ರಾಜ್ಯದ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ ಅವರು, ಮಾನವೀಯತೆಯ ಆಧಾರದಲ್ಲಿ ಈ ಬೇಡಿಕೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮಾನವೀಯ ನೆಲೆಯಲ್ಲಿ ಈ ಬೇಡಿಕೆಯನ್ನು ಪರಿಗಣಿಸಿ ಪರಿಶೀಲನೆ ನಡೆಸಲಾಗುವುದು. ಹತ್ತು ವರ್ಷಗಳ ಸೇವಾವಧಿಯನ್ನು ಪೂರೈಸಿರುವ ಶಿಕ್ಷಕರು, ಉಪನ್ಯಾಸಕರ ಸೇವೆಯನ್ನು ಖಾಯಂ ಗೊಳಿಸಿ, ಪ್ರತಿ 12 ತಿಂಗಳಿಗೊಮ್ಮೆ ಮರು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ಬೇಡ. ಕಾಯಂ ಆಗುವವರೆಗೂ ಬಳಕೆ ಮಾಡಿಕೊಳ್ಳುತ್ತಿರಬೇಕು. ಮಾಸಿಕ ಕನಿಷ್ಟ 25 ಸಾವಿರ ರೂ. ಗಳನ್ನು ವೇತನವಾಗಿ ನೀಡುವಂತೆಯೂ ಅವರು ಬೇಡಿಕೆ ಇರಿಸಿದ್ದಾರೆ ಎಂದು ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.