ಮಂಗಳೂರು: ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸುವುದಾಗಿ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಮಂಗಳೂರಿನ ಪಚ್ಚನಾಡಿ, ಕುಡುಪು, ಮಂದಾರ ಪ್ರದೇಶಗಳಲ್ಲಿ ಘನತ್ಯಾಜ್ಯಗಳಿಂದ ಈ ಹಿಂದೆ ಉಂಟಾಗಿದ್ದ ಅವಘಡದ ವಿಚಾರವಾಗಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಕೆ ಮಾಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎ ಎಸ್ ಒಕ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶವನ್ನು ನೀಡಿದೆ.
ಈ ಸಂಬಂಧ ಈ ಯೋಜನೆಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ಅವರು ಹಾಜರಾಗಿ, ಸರ್ಕಾರ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡೇ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ನಡೆಸಲಿದೆ ಎಂದು ನ್ಯಾಯ ಪೀಠಕ್ಕೆ ಭರವಸೆಯನ್ನು ನೀಡಿದ್ದಾರೆ. ಹಾಗೆಯೇ ಈ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನ್ಯಾಯ ಪೀಠಕ್ಕೆ ಮುಚ್ಚಳಿಕೆಯನ್ನೂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.