ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜು ʼನಮ್ಮ ಮೆಟ್ರೋʼ ನಿಲ್ದಾಣಕ್ಕೆ ಡಾ. ಎಚ್. ಎನ್. ನಿಲ್ದಾಣ ಎಂದು ನಾಮಕರಣ ಮಾಡುವಂತೆ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಹಿರಿಯ ಶಿಕ್ಷಣ ಪ್ರೇಮಿ ಡಾ. ಎಚ್. ನರಸಿಂಹಯ್ಯ ಅವರ ಹೆಸರನ್ನು ನ್ಯಾಷನಲ್ ಕಾಲೇಜಿನ ಮೆಟ್ರೋ ನಿಲ್ದಾಣಕ್ಕೆ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಇಂತಹ ಮಹಾಪುರಷರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅವರ ಹೆಸರನ್ನು ಸಾರ್ವಜನಿಕ ವಸ್ತು ವಿಚಾರಗಳಿಗೆ ಇರಿಸಿ ಸ್ಮರಣೆ ಮಾಡುವ ಕ್ರಮ ನಮ್ಮಲ್ಲಿದೆ. ಈ ಹಿನ್ನೆಲೆಯಲ್ಲಿ ಅವರ ಹೆಸರನ್ನು ನಾಮಕರಣ ಮಾಡುವ ಮೂಲಕ ಅವರ ಸೇವೆಗೆ ಗೌರವ ನೀಡಲು ಈ ಮನವಿಯನ್ನು ಪುರಸ್ಕರಿಸುವಂತೆ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಗತಿಪರ ಧೊರಣೆಯ ಚಿಂತನೆಗಳಿಂದ ನರಸಿಂಹಯ್ಯ ಅವರು ಹೆಸರಾಗಿದ್ದವರು. ನ್ಯಾಷನಲ್ ಕಾಲೇಜು ಎಂದಾಕ್ಷಣ ನೆನಪಾಗುವ ವ್ಯಕ್ತಿಗಳಲ್ಲಿ ಅವರೂ ಒಬ್ಬರು. ಸರಳತೆಯ ಸಾಕಾರಮೂರ್ತಿಯಾಗಿದ್ದ ಅವರು ಮಾನವತಾವಾದಿ, ರಾಷ್ಟ್ರೀಯತಾವಾದಿಯೂ ಹೌದು. ಅಧ್ಯಾಪಕರಾಗಿದ್ದ ಅವರು ಸ್ನೇಹಮಯ ವ್ಯಕ್ತಿತ್ವವನ್ನು ಹೊಂದಿದ್ದರು. ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಈ ಮನವಿ ಸಲ್ಲಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.