ಚಾಮರಾಜನಗರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಕಾರ್ಮಿಕರಿಗೆ ಬೇಸಿಗೆ ಅವಧಿಯಲ್ಲಿ ಕೆಲಸವಿಲ್ಲದಿರುವುದನ್ನು ತಡೆಯುವ ಪ್ರಯತ್ನವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು ತಿಂಗಳವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳು ತಮ್ಮ ಗ್ರಾಮದಲ್ಲಿ ಸರಿಯಾದ ಕೆಲಸಗಳು ದೊರೆಯದೆ ವಲಸೆಗೆ ಮೊರೆ ಹೋಗುವಂತಾಗಿದೆ. ಈ ಪ್ರವೃತ್ತಿಯನ್ನು ತಡಯುವ ಸಲುವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜನರಿಗೆ ಸ್ಥಳೀಯವಾಗಿ ಉದ್ಯೋಗ ನೀಡಲಾಗುತ್ತದೆ. ಬೇಸಿಗೆ ಕಾಲದಲ್ಲಿ ಎಲ್ಲಿಯೂ ಉದ್ಯೋಗ ಸಮಸ್ಯೆ ಕಾಡದಿರಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಉದ್ಯೋಗ ಒದಗಿಸುವ ಕಾರ್ಯವನ್ನು ಹಮ್ಮಿಕೊಂಡಿದೆ.
ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳು ಜೀವನ ನಿರ್ವಹಣೆಗಾಗಿ ವಲಸೆ ಪ್ರವೃತ್ತಿಯನ್ನು ಅವಲಂಭಿಸಿವೆ. ಈ ಪ್ರವೃತ್ತಿಯನ್ನು ತಡೆಯಲು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜನರಿಗೆ ಸ್ಥಳೀಯವಾಗಿ ಉದ್ಯೋಗ ನೀಡಲಾಗುತ್ತಿದೆ. ಬೇಸಿಗೆ ಅವಧಿಯಲ್ಲಿಯೂ ಗ್ರಾಮೀಣ ಜನರಿಗೆ ಉದ್ಯೋಗ ಸಮಸ್ಯೆ ಬಾರದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಅವಕಾಶ ಒದಗಿಸುವ ಸಲುವಾಗಿ ವಿಶೇಷವಾಗಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಾರ್ಚ್ 15 ರಿಂದ ಮುಂದಿನ 3 ತಿಂಗಳವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯೋಣ ಬಾ ಅಭಿಯಾನ ನಡೆಯಲಿದೆ.
ಮಾ.15 ರಿಂದ 22ರವರೆಗೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಭಿಯಾನ ಕುರಿತು ಜನ ಜಾಗೃತಿ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಉದ್ಯೋಗ ಚೀಟಿ ಹೊಂದಿಲ್ಲದೆ ಇರುವ ಕುಟುಂಬಗಳಿಂದ ಉದ್ಯೋಗ ಚೀಟಿಗಾಗಿ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಪಡೆಯಬೇಕು. ಜನ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ನೋಂದಾಯಿತ ಕೂಲಿ ಕಾರ್ಮಿಕರಿಂದ ಒಂದೇ ಬಾರಿಗೆ ಮೂರು ತಿಂಗಳ ಕೆಲಸದ ಬೇಡಿಕೆ ಪಡೆಯಬೇಕು ಎಂದು ಸೂಚಿಸಲಾಗಿದೆ. ಮಾರ್ಚ್ 23 ರಿಂದ 31ರವರೆಗೆ ಉದ್ಯೋಗ ಚೀಟಿಗಾಗಿ ಅರ್ಜಿ ಸಲ್ಲಿಸಿದ ಎಲ್ಲಾ ಕುಟುಂಬಗಳಿಗೆ ಉದ್ಯೋಗ ಚೀಟಿ ವಿತರಿಸಬೇಕು. ಮತ್ತು ಉದ್ಯೋಗ ಆಶ್ರಯಿಸುವ ಕುಟುಂಬದವರಿಗೆ ಎಪ್ರಿಲ್ 1 ರಿಂದ ಜೂನ್ 15ರವರೆಗೆ ಪ್ರತಿ ಸೋಮವಾರ ಕೆಲಸದ ಬೇಡಿಕೆ ಸಲ್ಲಿಸಿದ ವಿವರಗಳನ್ನು ದಾಖಲಿಸಿ ಎರಡು ದಿನಗಳೊಳಗೆ ಕೆಲಸ ಒದಗಿಸಬೇಕು. ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಶಿಶು ಪಾಲನೆಯಂತಹ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುದಾಗಿ ಸೂಚಿಸಲಾಗಿದೆ.
ಈ ಅಭಿಯಾನದ ಸುಗಮ ನಿರ್ವಹಣೆ, ಪ್ರಗತಿಗಾಗಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿ ಸಮಿತಿ ರಚಿಸಿ ಸೂಕ್ತ ಜವಾಬ್ದಾರಿಗಳನ್ನು ನಿಗದಿಪಡಿಸಲಾಗಿದೆ. ಅಭಿಯಾನ ಅವಧಿಯಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬದು, ಕೃಷಿ ಹೊಂಡ, ತೆರೆದ ಬಾವಿ, ಸೋಕ್ ಪಿಟ್ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಮಗ್ರ ಕೆರೆ ಅಭಿವೃದ್ಧಿ ಕಾರ್ಯಕ್ರಮದಡಿ ಕಾಲುವೆಗಳ ಪುನಶ್ಚೇತನ, ಕೆರೆಗಳ ಹೂಳು ತೆಗೆಯುವುದು, ಕೆರೆ ಏರಿ ಮತ್ತು ಕೋಡಿ ದುರಸ್ಥಿ, ಕೆರೆ ಅಂಚಿನಲ್ಲಿ ಅರಣ್ಯೀಕರಣ ಕಾಮಗಾರಿ ಕೈಗೊಳ್ಳಲು ಆದ್ಯತೆ ನೀಡಲಾಗಿದೆ. ಒಟ್ಟು ಈ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯಲು ಅವಕಾಶವಿದ್ದು ಬೇಸಿಗೆ ಅವಧಿಯಲ್ಲಿ 60 ದಿನಗಳು ಕೆಲಸ ನಿರ್ವಹಿಸಿದಲ್ಲಿ 16,500 ರೂ.ಗಳನ್ನು ಪಡೆಯಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.