ನವದೆಹಲಿ: ಬಿಜೆಪಿ ತನ್ನ ಎಲ್ಲ ಸಂಸದರಿಗೆ ಆಯಾ ಕ್ಷೇತ್ರಗಳಲ್ಲಿನ ಒಟ್ಟು ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಗಳ ಬಗ್ಗೆ ಮಾಹಿತಿ ನೀಡುವಂತೆ ಮಂಗಳವಾರ ಕೇಳಿದೆ. ಇದಲ್ಲದೆ, ಪ್ರತಿ ಬಿಜೆಪಿ ಸಂಸದರು ಎಷ್ಟು ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ ಮತ್ತು ಅಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೆ ಅಥವಾ ಇಲ್ಲವೇ ಎಂಬ ಬಗ್ಗೆಯೂ ಮಾಹಿತಿ ನೀಡುವಂತೆ ಕೋರಿದೆ.
ವಿಶೇಷವೆಂದರೆ, ಇದು ಮಾರ್ಚ್ 17 ರಂದು ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚುವಲ್ ಸಭೆಯ ಒಂದು ದಿನ ಮೊದಲು ಈ ಮಾಹಿತಿ ಕೋರಲಾಗಿದೆ.
ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ವರ್ಚುವಲ್ ಸಭೆ ನಡೆಸಲು ಸಜ್ಜಾಗಿದ್ದಾರೆ. ವೈರಸ್ ಅನ್ನು ನಿಭಾಯಿಸುವಲ್ಲಿ ರಾಜ್ಯಗಳ ಪ್ರಯತ್ನಗಳನ್ನು ಪರಿಶೀಲಿಸಲು ಮತ್ತು ಚರ್ಚಿಸಲು ನಾಳೆ ಸಭೆ ನಡೆಸಲಿದ್ದಾರೆ.
ಭಾರತದ ವ್ಯಾಕ್ಸಿನೇಷನ್ ಡ್ರೈವ್ ದೊಡ್ಡಮಟ್ಟದಲ್ಲಿ ನಡೆಯುತ್ತಿದ್ದು, ಮಂಗಳವಾರ ಬೆಳಿಗ್ಗೆ 8 ರವರೆಗೆ 3,29,47,432 ಕ್ಕೂ ಹೆಚ್ಚು ಲಸಿಕೆ ಡೋಸ್ ಅನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕೃತ ವೆಬ್ಸೈಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.