ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಬರ ಪೀಡಿತವಾಗಿರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಮೂರು ವರ್ಷಗಳಿಂದ ಬರ ಪೀಡಿತವಾಗಿ, ಕುಡಿಯುವ ನೀರಿಗೂ ತತ್ತರಿಸುತ್ತಿರುವ ಪ್ರದೇಶಗಳಿಗೆ ಸಂಬಂಧಿಸಿದಂತೆ ಆ ತಾಲೂಕಿನ ಕಾರ್ಯಪಡೆಗಳಿಗೆ 35 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಖಾತೆಗೆ 15 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲು ಆದೇಶ ನೀಡಲಾಗಿರುವುದಾಗಿಯೂ ಅವರು ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅವರು, ಎರಡು ವರ್ಷಗಳಿಂದ ಬರಪೀಡಿತವಾಗಿರುವ ತಾಲೂಕಿಗೆ ಒಟ್ಟು 35 ಲಕ್ಷ ರೂ., ಒಂದು ವರ್ಷದಿಂದ ಬರದಿಂದಾಗಿ ನೀರಿನ ಸಮಸ್ಯೆ ಅನುಭಿಸುತ್ತಿರುವ ತಾಲ್ಲೂಕಿಗೆ 25 ಲಕ್ಷ ಮತ್ತು ಬರಪೀಡಿತವಲ್ಲದ ತಾಲ್ಲೂಕಿಗೆ 15 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.