ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿತ್ಯ 100 ಮಂದಿಗೆ ಪರೀಕ್ಷೆ ಮತ್ತು ಆಸ್ಪತ್ರೆಗಳಲ್ಲಿ 500 ಜನರಿಗೆ ಕೊರೋನಾ ಲಸಿಕೆ ನೀಡುವ ಗುರಿಯನ್ನು ಆರೋಗ್ಯ ಸಿಬ್ಬಂದಿಗಳಿಗೆ ವಹಿಸಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕರ್ನಾಟಕದ ಸಮೀಪದಲ್ಲಿರುವ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿಯೂ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ನಿಯಮಗಳನ್ನುಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಅವರು ತಿಳಿಸಿದ್ದಾರೆ.
ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದರೆ ಮತ್ತೆ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಹೇರುವುದು ಅನಿವಾರ್ಯವಾಗುತ್ತದೆ. ರಾಜ್ಯದಲ್ಲಿ ಈಗಿರುವ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಲಸಿಕೆ ವಿತರಣೆ ಮಾಡಲಾಗುವುದು. ಹಾಗೆಯೇ ಸೋಂಕಿತರ ಪ್ರತ್ಯಕ್ಷ ಮತ್ತು ಪರೋಕ್ಷ ಸಂಪರ್ಕ ನಡೆಸಿದವರನ್ನು ಪತ್ತೆ ಹಚ್ಚಿ ಅವರಿಗೂ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಸೂಚಿಸಿರುವದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.