ಚಿತ್ರದುರ್ಗ: ಪ್ರಸ್ತುತ ರಾಜ್ಯದ 5 ಜಿಲ್ಲೆಗಳಲ್ಲಿ ಮಾತ್ರವೇ ಮಕ್ಕಳಿಗಾಗಿ ಪುಟಾಣಿ ರೈಲುಗಳಿದ್ದು, ಈದನ್ನು ರಾಜ್ಯದ ಉಳಿದ ಜಿಲ್ಲೆಗಳಿಗೂ ವಿಸ್ತರಣೆ ಮಾಡುವುದಕ್ಕೆ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿನ 30 ಜಿಲ್ಲೆಗಳಲ್ಲಿಯೂ ಬಾಲಭವನಗಳು ಇವೆ. ಆದರೆ ಅಲ್ಲಿ ಆಟಿಕೆಗಳ ಕೊರತೆ ಇದೆ. ಹಲವು ದುರಸ್ಥಿಯಲ್ಲಿವೆ. ಅವೆಲ್ಲವುಗಳನ್ನು ನವೀಕರಿಸುವ ಮೂಲಕ ರಾಜ್ಯದಲ್ಲಿ ಹೈಟೆಕ್ ಬಾಲಭವನಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಬಾಲಭವನಗಳ ನವೀಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಚೇರಿಗಳಲ್ಲಿ ಅನುದಾನದ ಕೊರತೆ ಇಲ್ಲ. ಆದರೆ ಜಾಗದ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ಜಿಲ್ಲೆಯಲ್ಲಿಯೂ ಈ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ 6 ಎಕರೆಗಳಷ್ಟು ಸ್ಥಳಾವಕಾಶ ದೊರೆತಲ್ಲಿ ಸುಸಜ್ಜಿತ ಬಾಲಭವನಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.