ನವದೆಹಲಿ: ವಿಶ್ವವೇ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಲುಗುತ್ತಿದ್ದ ಸಂದರ್ಭದಲ್ಲಿ ಭಾರತ ಇಡೀ ವಿಶ್ವದ ಅಗತ್ಯತೆಗಳನ್ನು ಪೂರೈಸುವ ದೃಷ್ಟಿಯಿಂದ ಕಾರ್ಯ ನಿರ್ವಹಿಸುವ ಪ್ರಯತ್ನ ನಡೆಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಫಿನ್ಲ್ಯಾಂಡ್ ನ ಪ್ರಧಾನಿ ಸನ್ನಾ ಮರಿನ್ ಅವರ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ಮೋದಿ ಅವರು, ಭಾರತದಲ್ಲಿ ಸಿದ್ಧಪಡಿಸಲಾಗಿರುವ 58 ದಶ ಲಕ್ಷಕ್ಕೂ ಹೆಚ್ಚಿನ ಲಸಿಕೆ ವಿಶ್ವದ ಸುಮಾರು 70 ದೇಶಗಳಿಗೆ ತಲುಪಿವೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ಭಾರತ ಮತ್ತು ಫಿನ್ಲ್ಯಾಂಡ್ ರಾಷ್ಟ್ರಗಳು ಪಾರದರ್ಶಕ, ಮಾನವೀಯ ಮತ್ತು ಪ್ರಜಾಪ್ರಭುತ್ವದ ಮೇಲೆ ಹೆಚ್ಚಿನ ನಂಬಿಕೆ ಭರವಸೆ ಇರಿಸಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಉಭಯ ದೇಶಗಳು ತಂತ್ರಜ್ಞಾನ, ನಾವಿನ್ಯತೆ, ಶುದ್ಧ ವಿದ್ಯುತ್ ಶಕ್ತಿ, ಪರಿಸರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪರಸ್ಪರ ಸಹಕಾರವನ್ನು ಹೊಂದಿವೆ. ಪ್ರಸ್ತುತ ಕೊರೋನಾ ಸಂದರ್ಭದಲ್ಲಿಯೂ ಉಭಯ ದೇಶಗಳು ಪರಸ್ಪರ ಸಹಕಾರವನ್ನು ಹೊಂದಿರುವುದಾಗಿ ಅವರು ಮೋದಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.