ನವದೆಹಲಿ: ದೇಶದಲ್ಲಿ ಚಾರ್ಟೆಡ್ ಅಕೌಂಟೆಂಟ್ (ಸಿಎ), ಕಂಪೆನಿ ಸೆಕ್ರೆಟರಿ (ಸಿಎಸ್) ಅಥವಾ ಐಸಿಡಬ್ಲುಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸ್ನಾಥಕೋತ್ತರ ಪದವೀಧರರೆಂದು ಪರಿಗಣಿಸಬಹುದಾಗಿದೆ ಎಂದು ಯುಜಿಸಿ ತಿಳಿಸಿದೆ.
ಈ ಸಂಬಂಧ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ, ಐಸಿಎಸ್ಐ, ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾದಿಂದ ಮನವಿಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಯುಜಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಈ ವರದಿಯನ್ನು ಪರಿಗಣನೆಗೆ ತೆಗೆದುಕೊಂಡು ಯುಜಿಸಿ ಇಂದ ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು. ಆಯೋಗ ಸಮಿತಿಯ ಶಿಫಾರಸಿನ ಅನ್ವಯ ಸಿಎ, ಸಿಎಸ್ ಮತ್ತು ಐಸಿಡಬ್ಲ್ಯುಎ ಅರ್ಹತೆಯನ್ನು ಸ್ನಾಥಕೋತ್ತರ ಪದವಿಗೆ ಸಮಾನವೆಂದು ಪರಿಗಣಿಸಲಾಗಿರುವುದಾಗಿಯೂ ತಿಳಿಸಿದೆ.
ಯುಜಿಸಿಯ ಈ ನಿರ್ಧಾರವನ್ನು ಐಸಿಎಐ ಸ್ವಾಗತಿಸಿದೆ. ಯುಜಿಸಿಯ ಈ ಕ್ರಮ ಸಿಎ ಮೊದಲಾದ ಉನ್ನತ ಶಿಕ್ಷಣ ಪಡೆಯುವ ಅಭ್ಯರ್ಥಿಗಳಿಗೆ ನೆರವಾಗುವುದರ ಜೊತೆಗೆ, ಜಾಗತಿಕವಾಗಿಯೂ ಭಾರತೀಯ ಸಿಎ ಅಭ್ಯರ್ಥಿಗಳ ಚಲನಶೀಲತೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.