ನವದೆಹಲಿ: ದೇಶದಲ್ಲಿ ಕೊರೋನಾದ ಎರಡನೇ ಅಲೆಯ ಭೀತಿ ಇದ್ದು, ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಬೆ ನಡೆಸಿದ್ದಾರೆ. ದೇಶದಲ್ಲಿ ಕೊರೋನಾ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಂವಾದ ನಡೆಸಲಾಗಿದ್ದು, ಎಲ್ಲಾ ರಾಜ್ಯಗಳಲ್ಲಿನ ಕೊರೋನಾ ಪರಿಸ್ಥಿತಿಗಳು ಮತ್ತು ಅವುಗಳನ್ನು ಸಮರ್ಥವಾಗಿ ನಿಭಾಯಿಸಲು ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತಂತೆ ಪ್ರಧಾನಿಗಳು ಮಾಹಿತಿ ಪಡೆದಿದ್ದಾರೆ. ಕರ್ನಾಟಕದ ಮುಖ್ಯಮಂತ್ರ ಬಿ ಎಸ್ ಯಡಿಯೂರಪ್ಪ ಅವರನ್ನೊಳಗೊಂಡಂತೆ 5 ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಮ್ಮ ತಮ್ಮ ರಾಜ್ಯಗಳಲ್ಲಿನ ಕೊರೋನಾ ಪರಿಸ್ಥಿತಿಯ ಬಗ್ಗೆ ತಿಳಿಸಲು ಅವಕಅಶ ನೀಡಲಾಗಿದೆ.
ಕೊರೋನಾ ನಿಯಮಗಳ ಕಡ್ಡಾಯ ಪಾಲನೆ ಸೇರಿದಂತೆ ಕೆಲವು ಹೊಸ ನಿಯಮಗಳ ಬಗ್ಗೆಯೂ ಈ ಸಭೆಯಲ್ಲಿ ಚರಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಮತ್ತೆ ನೂತನ ಕಠಿಣ ನಿಯಮಗಳನ್ನು ರೂಪಿಸುವ, ಮಾರ್ಗಸೂಚಿ ಹೊರಡಿಸುವುದಕ್ಕೆ ಸಂಬಂಧಿಸಿದಂತೆಯೂ ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳ ನಡುವೆ ಮಾತುಕತೆ ನಡೆದಿದೆ. ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದೇ ಪ್ರಕಟಿಸುವ ಸಾಧ್ಯತೆ ಇರುವುದಾಗಿಯೂ ಮೂಲಗಳು ತಿಳಿಸಿವೆ.
ಸಿಎಂ ಗಳ ಜೊತೆ ಸಂವಾದದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಟೆಸ್ಟ್, ಟ್ರೇಸ್, ಟ್ರೀಟ್ ಎಂಬ ಮೂರು ಅಂಶಗಳ ಮೂಲಕ ಕೊರೋನಾ ಸೋಂಕು ನಿಯಂತ್ರಣ ನಿರ್ವಹಣೆ ಮಾಡುವಂತೆ ಸೂಚಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ. ಕೊಂಚ ಶ್ರಮ ವಹಿಸಿದಲ್ಲಿ ಕೊರೋನಾ ನಿಯಂತ್ರಣ ಸಾಧ್ಯ ಎಂದು ತಿಳಿಸಿದ್ದಾರೆ. ಹೆಚ್ಚು ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆಯೂ ಅವರು ಹೇಳಿದ್ದಾರೆ.
ಹಾಗೆಯೇ ಕೊರೋನಾ ಬಗ್ಗೆ ಅತಿಯಾದ ಆತ್ಮವಿಶ್ವಾಸ ಬೇಡ, ಹೆಚ್ಚು ಭಯವೂ ಬೇಡ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ವಚ್ಛತೆ ಬಗ್ಗೆ ಎಚ್ಚರ ವಹಿಸುವಂತೆಯೂ ಪ್ರಧಾನಿ ತಿಳಿಸಿದ್ದಾರೆ. ಹಾಗೆಯೇ ಕೊರೋನಾ ವ್ಯಾಕ್ಸಿನ್ಗಳು ನಿರುಪಯುಕ್ತವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಮೊದಲು ಬಂದ ಲಸಿಕೆಗಳನ್ನು ಮೊದಲು ಬಳಕೆ ಮಾಡುವಂತೆಯೂ ಅವರು ಸೂಚಿಸಿದ್ದಾರೆ. ಜೊತೆಗೆ ದೇಶದಲ್ಲಿ ಕೊರೋನಾ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡುವಂತೆ ಅವರು ತಿಳಿಸಿದ್ದಾರೆ. ಹಳ್ಳಿಗಳಿಗೆ ಕೊರೋನಾ ಹರಡದಂತೆ ಎಚ್ಚರ ವಹಿಸುವಂತೆಯೂ ಅವರು ಸೂಚಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಿನನಿತ್ಯವೂ ಸಭೆ ನಡಿಸಿ ಅವಲೋಕನ ನಡೆಸುವುದು ತೀರಾ ಅಗತ್ಯ ಎಂದು ಇದೇ ಸಂದರ್ಭದಲ್ಲಿ ಪ್ರಧಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.