ಬೆಂಗಳೂರು: ರಾಜ್ಯ ಕೊರೋನಾ ಎರಡನೇ ಅಲೆಯನ್ನೆದುರಿಸುವ ಭೀತಿಯಲ್ಲಿ ಸರ್ಕಾರ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಸುತ್ತೋಲೆಯನ್ನು ಹೊರಡಿಸಿದೆ.
ರಾಜ್ಯದಲ್ಲಿ ದೈನಂದಿನ ಕೊರೋನಾ ಮಾದರಿ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಈ ಸುತ್ತೋಲೆಯಲ್ಲಿ ಮಾಹಿತಿ ಇದ್ದು, ದಿನನಿತ್ಯ ಸುಮಾರು 1 ಲಕ್ಷಗಳಷ್ಟು ಜನರಿಗೆ ಕೊರೋನಾ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಆ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಸಚಿವ ಡಾ ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಒಟ್ಟು ದೈನಂದಿನ ಕೋವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಒಟ್ಟು ದೈನಂದಿನ ಕೋವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.
In order to prevent and mitigate the second wave of Covid-19, the daily target of tests in the state has been increased to 1 lakh.@DHFWKA pic.twitter.com/EtvmjWuw8e
— Dr Sudhakar K (@DrSudhakar_) March 17, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.