ತುಮಕೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶೈಕ್ಷಣಿಕ ವಿಚಾರಗಳೂ ಅಲ್ಲೋಲ ಕಲ್ಲೋಲವಾಗಿವೆ. ಪ್ರಸಕ್ತ ವರ್ಷ ವಿದ್ಯಾರ್ಥಿಗಳಿಗೆ ತರಗತಿಗಳೇ ನಡೆದಿಲ್ಲ. ಆದರೂ ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಹಂತದ ಅಲೆ ಆರಂಭವಾಗುವಂತಿದೆ. ಈ ಎಲ್ಲಾ ಆಂಶಗಳನ್ನು ಗಮನದಲ್ಲಿರಿಸಿಕೊಂಡು ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಂದು ಆರಂಭಿಸಲು ಚಿಂತನೆ ನಡೆಸಿರುವುದಾಗಿ ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ 1-5 ನೇ ತರಗತಿ ವರೆಗಿನ ಶಾಲಾರಂಭ ಇಲ್ಲ. ಸರ್ಕಾರದ ಈ ನಿಯಮವನ್ನು ಗಾಳಿಗೆ ತೂರುವ ಶಾಲೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗೆಯೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.