ನವದೆಹಲಿ: ರಾಜ್ಯದ ಕೊಡಗು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ. ಎ. ಗಣಪತಿ ಅವರನ್ನು ಎನ್ಎಸ್ಜಿ ಮಹಾನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ ಗಣಪತಿ ಅವರನ್ನು ಈ ಹುದ್ದೆಗೆ ನೇಮಕ ಮಾಡಲು ಅನುಮೋದನೆ ನೀಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ (ಡಿಒಪಿಟಿ) ತನ್ನ ಆದೇಶದಲ್ಲಿ ತಿಳಿಸಿದೆ. ಗಣಪತಿ ಅವರಿಗೆ 57 ವರ್ಷಗಳಾಗಿದ್ದು, ಅವರು 1986 ಐಪಿಎಸ್ ಬ್ಯಾಚ್ನ ಅದಿಕಾರಿಯಾಗಿದ್ದರು. ಇವರು ಉತ್ತರಾಖಂಡದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಸಿವಿಲ್ ಏವಿಯೇಷನ್ ಸೆಕ್ಯುರಿಟಿಯ ಮಹಾನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಿಆರ್ಪಿಎಫ್ನ ಮಹಾನಿರ್ದೇಶಕರಾಗಿ ಪ. ಬಂಗಾಳದ ಕೇಡರ್ನ 1986 ಬ್ಯಾಚ್ನ ಐಪಿಎಸ್ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.