ಶ್ರೀನಗರ: 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಒಟ್ಟು 520 ಕಾಶ್ಮೀರಿ ವಲಸಿಗರು ಕಣಿವೆಗೆ ಮರಳಿದ್ದಾರೆ ಮತ್ತು ಸುಮಾರು 2,000 ಜನರು ಈ ವರ್ಷದ ವೇಳೆಗೆ ಮರಳುವ ನಿರೀಕ್ಷೆಯಿದೆ ಎಂದು ರಾಜ್ಯ ಗೃಹ ಸಚಿವ ಜಿ ಕಿಶನ್ ರೆಡ್ಡಿ ಅವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಕೇಂದ್ರದ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಒದಗಿಸಲಾದ ಉದ್ಯೋಗಗಳನ್ನು ಪಡೆದುಕೊಳ್ಳುವ ಸಲುವಾಗಿ ಕಾಶ್ಮೀರಿ ವಲಸಿಗರು ಮರಳಿ ಕಾಶ್ಮೀರಕ್ಕೆ ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಿಶನ್ ರೆಡ್ಡಿ ಅವರು ನಿನ್ನೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಹೆಚ್ಚುವರಿ 2,000 ವಲಸಿಗರು ತಮ್ಮ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕಣಿವೆಗೆ ಮರಳಲಿದ್ದಾರೆ ಎಂದು ರೆಡ್ಡಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.