ಧಾರವಾಡ: ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರು ಹುತಾತ್ಮರಾದ ದಿನದ ಸ್ಮರಣಾರ್ಥ 23 ಮಾರ್ಚ್ 2021 ರಂದು ಧಾರವಾಡದ ಶ್ರೀನಗರ ಸರ್ಕಲ್ನಲ್ಲಿ ಸಂಜೆ 6.30 ಕ್ಕೆ ವೀರ ನಮನ ಎಂಬ ಸಾರ್ವಜನಿಕ ಕಾರ್ಯಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜನೆ ಮಾಡಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಎಬಿವಿಪಿ, ದೇಶದ ಸ್ವಾತಂತ್ರ್ಯಕ್ಕಾಗಿ ಅಂದು ಹಲವಾರು ವೀರಪುತ್ರರು ಹುತಾತ್ಮರಾಗಿದ್ದಾರೆ. ಅಂದಿನಿಂದ ಇಂದಿನವರೆಗೂ ದೇಶಕ್ಕಾಗಿ ಇಂತಹ ಬಲಿದಾನಗಳು ನಡೆಯುತ್ತಲೇ ಇವೆ. ಅಂದು ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ ಹಲವು ವೀರರಿಗೆ ಮತ್ತು ಇಂದು ದೇಶದ ರಕ್ಷಣೆಯ ದೃಷ್ಟಿಯಿಂದ ಪ್ರಾಣಾರ್ಪಣೆ ಮಾಡಿದ ಹಲವು ಮಂದಿ ಹುತಾತ್ಮರನ್ನು ನೆನಪಿಸಿಕೊಳ್ಳುವ, ಅವರಿಗೆ ಗೌರವ ಸಲ್ಲಿಸಬೇಕಾದ ಕಾರ್ಯವನ್ನು ಮಾಡಬೇಕಾಗಿದೆ ಎಂದು ತಿಳಿಸಿದೆ.
ʼಸ್ವಂತಕ್ಕೆ ಸ್ವಲ್ಪ, ದೇಶಕ್ಕೆ ಸರ್ವಸ್ವʼ ಎಂಬ ಸಂದೇಶ ಸಾರಬೇಕಾಗಿದ್ದು, ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯ ನಿರ್ವಹಿಸುತ್ತಿದೆ. ಸರ್ವೇ ಜನ ಸುಖಿನೋ ಭವಂತು ಎಂಬ ಆಶಯದ ಜೊತೆಗೆ ನಾವೆಲ್ಲರೂ ಜಾತಿ ಧರ್ಮಗಳ ಬೇಧ ಮರೆತು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಈ ದೃಷ್ಟಿಯಿಂದ ವೀರ ನಮನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.