ಬೆಂಗಳೂರು: ರಾಜ್ಯದಲ್ಲಿನ ಭೂ ಮಾಫಿಯಾ, ಅತಿಕ್ರಮಣ ಮೊದಲಾದ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ವಕೀಲರ ತಂಡವನ್ನು ರಚನೆ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿರುವವರು, ಭೂ ಕಬಳಿಕೆ ಮಾಡುವವರು, ಅಕ್ರಮವಾಗಿ ಭೂ ನೋಂದಣಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇಂತಹ ಘಟನೆಗಳ ಬಗ್ಗೆ ಕಂದಾಯ ಇಲಾಖೆ ಅಥವಾ ಗೃಹಸಚಿವರಿಗೆ ಪತ್ರ ಬರೆದಲ್ಲಿ, ದೂರು ನೀಡಿದ 24 ಗಂಟೆಗಳೊಳಗಾಗಿ ವಕೀಲರ ತಂಡ ನೇಮಕ ಮಾಡುವ ಭರವಸೆಯನ್ನೂ ಬೊಮ್ಮಾಯಿ ನೀಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಸಚಿವ ಆರ್ ಅಶೋಕ್, ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನ್ಯಾಯಾಲಯದ ತಡೆ ಆದೇಶವನ್ನು ಪಡೆಯುವ ಆಯ್ಕೆಯನ್ನು ತೆಗೆದು ಹಾಕುವ ಹೊಸ ಕಾನೂನು ರೂಪಿಸುವುದೇ ಸೂಕ್ತ ಪರಿಹಾರ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.