ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧವಾಗಿದ್ದರೂ, ಇನ್ನೂ ಕೆಲವೆಡೆಗಳಲ್ಲಿ ಈ ವ್ಯವಸ್ಥೆ ನಡೆಯುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಠಣ ಕ್ರಮ ಕೈಗೊಳ್ಳಲಾಗುತ್ತದೆ ಎಂಸು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಆಧುನಿಕ ಯಂತ್ರಗಳನ್ನು ಬಳಕೆ ಮಾಡಿಕೊಂಡು ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕು ಎಂಬ ಕಠಿಣ ಮತ್ತು ಕಡ್ಡಾಯ ನಿಯಮವಿದೆ. ಆದರೂ ಕೆಲವು ಕಡೆಗಳಲ್ಲಿ ಜನರನ್ನು ಬಳಸಿಕೊಂಡು ಮಲ ಹೊರುವ ಪದ್ಧತಿ ಅನುಸರಣೆಯಾಗುತ್ತಿರುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಾಮಾಜಿಕ ಕಳಕಳಿಯ ಕೊರತೆಯ ಕಾರಣದಿಂದಲೇ ಇಂತಹ ದುರಂತಗಳು ನಡೆಯುತ್ತಿವೆ. ಹೊಲಸು, ತ್ಯಾಜ್ಯಗಳನ್ನು ಕೈಯಿಂದ ತೆಗೆಸುವುದು, ತಲೆಯ ಮೇಲೆ ಹೊರುವುದಕ್ಕೆ ನಿಷೇಧ ಹೇರಿದ್ದರೂ ಈ ವ್ಯವಸ್ಥೆ ಮುಂದುವರೆದಿರುವುದು ದುರಂತ. ಮಲ ಹೊರುತ್ತಿದ್ದ ಸಮುದಾಯಗಳ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಸರ್ಕಾರ ಸಫಾಯಿ ಕರ್ಮಚಾರಿ ಆಯೋಗವನ್ನು ರಚನೆ ಮಾಡಿದೆ. ಇದಕ್ಕೆ ಮತ್ತಷ್ಟು ಅನುದಾನ ನೀಡಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಕಂಡುಬಂದಲ್ಲಿ ಅಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.