ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಡೆಗೆ ಸರ್ಕಾರ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಈಗಾಗಲೇ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಇಂದು ಸುದ್ದಿಗೋಷ್ಟಿ ನಡೆಸಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿರುವ ಸಚಿವರು, ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳು, ಅಳವಡಿಸಿಕೊಳ್ಳಬೇಕಾದ ಕ್ರಮಗಳ ಕುರಿತಾಗಿಯೂ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹಾಸಿಗೆಗಳನ್ನು ಮೀಸಲಿಡುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾವುದೇ ಲೋಪಗಳಾಗದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ತಮ್ಮನ್ನೂ ಒಳಗೊಂಡಂತೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಮುಂದಿನ 50 ದಿನಗಳ ವರೆಗೆ ರಜೆ ಇಲ್ಲ ಎಂಬುದಾಗಿಯೂ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡಿಕೆಯ ಗುರಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗಿದ್ದು, ದಿನಕ್ಕೆ 3 ಲಕ್ಷ ಜನರಿಗೆ ಲಸಿಕೆ ನೀಡುವುದಕ್ಕೆ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಗೆಯೇ ಈ ಸಂಬಂಧ ಸಾರ್ವಜನಿಕರಿಗೂ ಕಿವಿಮಾತು ಹೇಳಿರುವ ಸುಧಾಕರ್, ಲಸಿಕೆ ಇದೆ ಎಂದು ಮಾಸ್ಕ್ ಮರೆಯುವಂತಿಲ್ಲ. ಹೆಚ್ಚು ಜನದಟ್ಟಣೆಯಾಗದಂತೆಯೂ ಮುಂಜಾಗ್ರತೆ ವಹಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನೆಲೆಯಲ್ಲಿಯೂ ಎಲ್ಲರೂ ಗಮನಹರಿಸುವಂತೆ ಅವರು ಸೂಚಿಸಿದ್ದಾರೆ.
ರಾಜ್ಯದ ಗಡಿ ಭಾಗಗಳ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನನಿತ್ಯ ಏರಿಕೆಯಾಗುತ್ತಲೇ ಇದೆ. ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 1000 ಕೇಸ್ಗಳು ಪತ್ತೆಯಾಗುತ್ತಿವೆ. ಆಸ್ಪತ್ರೆಗಳಲ್ಲಿ ಚಿಕಿತ್ಸಾ ಹಿನ್ನೆಲೆಯಲ್ಲಿ ಬೆಡ್ಗಳು ಸಹ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರು, ಕಲ್ಬುರ್ಗಿ, ಬೀದರ್ ಗಳಂತೂ ಕೊರೋನಾ ಹಾಟ್ ಸ್ಪಾಟ್ಗಳೆಂದೇ ಗುರುತಿಸಲ್ಪಟ್ಟಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪರಿಸ್ಥಿತಿ ಮತ್ತೆ ಕೈ ಮೀರುವ ಹಂತಕ್ಕೆ ತಲುಪಿದ್ದು ಈ ಹಿನ್ನೆಲೆಯಲ್ಲಿ ಈ ಸುದ್ದಿಗೋಷ್ಟಿ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.