ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಯ ಎರಡನೇ ಡೋಸ್ ಪಡೆದ ನಂತರವೂ ಕೆಲವು ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ಗಂಭೀರವಾದ ಪರಿಣಾಮಗಳು ಉಂಟಾಗುವುದಿಲ್ಲ ಎಂಬ ಭರವಸೆಯನ್ನು ಆರೋಗ್ಯ ತಜ್ಞರು ನೀಡಿದ್ದಾರೆ.
ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳನ್ನು ನೀಡಲಾಗುತ್ತಿದೆ. ಮೊದಲ ಡೋಸ್ ಪಡೆದ ನಾಲ್ಕು ವಾರಗಳ ಅಂತರದಲ್ಲಿ ಎರಡನೇ ಡೋಸ್ ನೀಡಲಾಗುತ್ತಿದೆ. ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವ ಮೂಲಕ, ಬಳಿಕ ಅವರಿಗೆ ಕೊರೋನಾ ವೈರಸ್ ಅಂಟಿಕೊಂಡರೂ ಯಾವುದೇ ರೀತಿಯ ಗಂಭೀರ ಪರಿಣಾಮಗಳಾಗುವುದಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯ, ಬೆಂಗಳೂರಿನ ಜಯದೇವ ಆಸ್ಪತ್ರೆಯ ವೈದ್ಯ ಡಾ ಮಂಜುನಾಥ ಪ್ರಸಾದ್ ಅವರು, ಕೊರೋನಾ ಲಸಿಕೆ ಪಡೆಯುವುದು ವಾಹನ ಚಾಲನೆಯ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೀಟ್ಬೆಲ್ಟ್ ಮತ್ತು ಏರ್ಬ್ಯಾಗ್ ಹಾಕಿಕೊಂಡಂತೆ. ಇದು ಕೊರೋನಾ ಬರದಂತೆ ಕಾಪಾಡುತ್ತದೆ. ಒಂದು ವೇಳೆ ಕೊರೋನಾ ಸೋಂಕು ಬಾಧಿಸಿದರೂ ಅದರಿಂದ ಯಾವುದೇ ರೀತಿಯ ದೊಡ್ಡ ಮಟ್ಟದ ಪರಿಣಾಮಗಳಾಗದಂತೆ ನಮ್ಮನ್ನು ಕಾಪಾಡುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.