ವಾಷಿಂಗ್ಟನ್: ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ III ಅವರು ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಆಗಮಿಸಲಿದ್ದಾರೆ. ಈ ಭೇಟಿಯ ವೇಳೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಯುಎಸ್ ರಕ್ಷಣಾ ಪ್ರಧಾನ ಕಾರ್ಯದರ್ಶಿ ಆಸ್ಟಿನ್ ಅವರು ಚೀನಾ ಮತ್ತು ಅಫ್ಘಾನಿಸ್ಥಾನ ಸೇರಿದಂತೆ ಪ್ರಮುಖ ಪ್ರಾದೇಶಿಕ ಭದ್ರತಾ ವಿಷಯಗಳ ಬಗ್ಗೆ ಮಾತುಕತೆ ನಡೆಸುವ ನಿರೀಕ್ಷೆ ಇದೆ.
ಅಮೆರಿಕಾದ ನೂತನ ಅಧ್ಯಕ್ಷರಾಗಿರುವ ಜೋ ಬೈಡನ್ ಆಡಳಿತದ ಅಧಿಕಾರಿಯೊಬ್ಬರು ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ, ಈ ಸಮಯದಲ್ಲಿ ಅನೇಕ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.
ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ನಿರೀಕ್ಷೆಯಿದ್ದು, ಶನಿವಾರ ವಿದೇಶಾಂಗ ಸಚಿವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಮಾರ್ಚ್ 19 ರಿಂದ 21 ರವರೆಗೆ ಆಸ್ಟಿನ್ ಭಾರತಕ್ಕೆ ಭೇಟಿ ನೀಡುತ್ತಿದ್ದು, ದೇಶದ ಉನ್ನತ ರಾಜಕೀಯ ಮತ್ತು ಮಿಲಿಟರಿ ನಾಯಕತ್ವವನ್ನು ಭೇಟಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.