ಬೆಂಗಳೂರು: ಕೊರೊನಾ ಹೆಚ್ಚಾದರೆ ಕಠಿಣ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಪ್ರತಿನಿತ್ಯ 1.5 ಸಾವಿರ ಪ್ರಕರಣಗಳು ದಾಖಲಾದರೆ ನೈಟ್ ಕಫ್ರ್ಯೂ ಜಾರಿಗೊಳಿಸಲು ತಜ್ಞರು ಸಲಹೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಿದಲ್ಲಿ ಉತ್ತಮ ಎಂದು ಆರೋಗ್ಯ ತಜ್ಞರಿಂದ ಸೂಚನೆ ನೀಡಿದ್ದಾರೆ. 1.5 ಸಾವಿರಗಳಷ್ಟು ಪ್ರಕರಣಗಳು ದಾಖಲಾದಲ್ಲಿ ಇಂತಹ ನಿರ್ಣಯ ಕೈಗೊಳ್ಳುವಂತೆ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ನಿಯಂತ್ರಣ ಜನರ ಸಾಮೂಹಿಕ ಜವಾಬ್ದಾರಿಯಾಗಿದ್ದು ಎಲ್ಲರೂ ಸರ್ಕರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸುಧಾಕರ್ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.