ಬೆಂಗಳೂರು: ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆಯನ್ನು ನೀಡಿದೆ.
ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಈ ಅನುಮೋದನೆ ನೀಡಲಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಸುಮಾರು 3,407 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆ ನೀಡಿತ್ತು. ಈ ಬಾರಿ 1,835 ಮಂದಿ ಅತಿಥಿ ಉಪನ್ಯಾಸಕರ ಭರ್ತಿಗೆ ಅನುಮೋದಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಖಾಲಿ ಇರುವ ಅಥಿತಿ ಉಪನ್ಯಸಕರ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯದ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಮನವಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021 ರ ಫೆಬ್ರವರಿ ತಿಂಗಳಿನಿಂದ ಅನುಗುಣವಾಗಿ ಮಾಸಿಕ 9 ಸಾವಿರ ರೂ. ಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆಯೂ ಶಿಕ್ಷಣ ಇಲಾಖೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.