ಮಂಗಳೂರು: ರಾಜ್ಯದ ಆರು ಕೇಂದ್ರಗಳಲ್ಲಿ ಟೆಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಲಿಪೋರ್ಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಕಲ್ಬುರ್ಗಿ, ಹಂಪಿಯಲ್ಲಿ ಹೆಲಿಪೋರ್ಟ್ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಈ ಪ್ರದೇಶಗಳಲ್ಲಿ ಹೆಲಿಪ್ಯಾಡ್ ವ್ಯವಸ್ಥೆಯೂ ಇರುತ್ತದೆ. ಈ ಕೇಂದ್ರಗಳ ಸಮೀಪದಲ್ಲೇ ಹೆಲಿಪ್ಯಾಡ್ಗಳು ಇರಲಿವೆ ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಸರ್ವೇ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕರಾವಳಿ ಭಾಗದಲ್ಲಿ ಸೀ ಪ್ಲೇನ್ಗೆ ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಉಡಾನ್ ಯೋಜನೆಯಡಿಯಲ್ಲಿ ಸೀ ಪ್ಲೇನ್ ಆರಂಭ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ನಿಟ್ಟಿನಲ್ಲಿ ಸರ್ವೇ ಕಾರ್ಯಗಳನ್ನು ನಡೆಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.