ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಸೋಮವಾರ ಮುಂಜಾನೆ ಭದ್ರತಾ ಪಡೆಗಳೊಂದಿಗಿನ ಮುಖಾಮುಖಿಯಲ್ಲಿ ಕನಿಷ್ಠ ಮೂರು ಭಯೋತ್ಪಾದಕರು ಹತರಾಗಿದ್ದಾರೆ, ಅವರಲ್ಲಿ ಇಬ್ಬರು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೋಯಿಬಾ (ಎಲ್ಇಟಿ) ಜೊತೆ ಸಂಬಂಧ ಹೊಂದಿದ್ದಾರೆ.
ವರದಿಗಳ ಪ್ರಕಾರ, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಶೋಪಿಯಾನ್ನ ಮಣಿಹಾಲ್ ಪ್ರದೇಶದಲ್ಲಿ ಎನ್ಕೌಂಟರ್ ಭುಗಿಲೆದ್ದಿತು. ಈ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಜಮ್ಮು-ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದಾರೆ. ಬಳಿಕ ಈ ಸಂಖ್ಯೆ ಮೂರಕ್ಕೇರಿತು. ಜಂಟಿ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.
#UPDATE – A total of three terrorists eliminated in the encounter with security forces in Shopian till now. Joint operation in progress: Chinar Corps, Indian Army#JammuAndKashmir
— ANI (@ANI) March 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.