ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸಲು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸೆಮಿ ಲಾಕ್ಡೌನ್ ಜಾರಿಯಾಗುತ್ತದೆ ಎಂಬುದಾಗಿ ಸುದ್ದಿಗಳು ಹರಿದಾಡುತ್ತಿದ್ದು, ಇದಕ್ಕೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರ ಸದ್ಯ ಲಾಕ್ಡೌನ್ ಅಥವಾ ಸೆಮಿ ಲಾಕ್ಡೌನ್ ಮಾಡುವ ಬಗ್ಗೆ ಯಾವುದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಆದರೆ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಜನತೆ ಕಡ್ಡಾಯವಾಗಿ ಪಾಲಿಸುವುದು ಕೊರೋನಾ ವ್ಯಾಪಿಸುವ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಚ್ಚು ಅಗತ್ಯವಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಸಹ ಅನುಸರಿಸಬೇಕು. ರಾಜ್ಯದಲ್ಲಿ ಈಗಾಗಲೇ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮದುವೆ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳುವುದಕ್ಕೂ ಅಗ್ತಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಮಾಸ್ಕ್ ಧರಿಸದೇ ಹೋದಲ್ಲಿ 250 ರೂ. ದಂಡ ತೆರಬೇಕಾಗುತ್ತದೆ. ಇದಕ್ಕಾಗಿ ಮಾರ್ಷಲ್ಗಳಿಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಯಿಂದ ಬರುವವರು ಕಡ್ಡಾಯವಾಗಿ ಆರ್ಟಿ-ಪಿಸಿಆರ್ ವರದಿಯನ್ನು ತಮ್ಮೊಂದಿಗೆ ಇರಿಸಿಕೊಂಡಿರಬೇಕು ಎಂದು ಸುಧಾಕರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಲಾಕ್ಡೌನ್ ಮಾಡುವ ಚಿಂತನೆ ಇಲ್ಲ. ಪರಿಸ್ಥಿತಿಗಳನ್ನು ಆಧರಿಸಿ, ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.