ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಜಲ ದಿನವಾದ ಇಂದು ‘ಜಲಶಕ್ತಿ ಅಭಿಯಾನ: ಕ್ಯಾಚ್ ದಿ ರೈನ್’ ಅಭಿಯಾನಕ್ಕೆ ವರ್ಚುವಲ್ ಆಗಿ ಚಾಲನೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರವು ಅಭಿವೃದ್ಧಿಯ ಪಥದತ್ತ ಚಲಿಸುತ್ತಿರುವ, ನೀರಿನ ಕೊರತೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕರು ಅಭಿಯಾನದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.
“21ನೇ ಶತಮಾನದ ಭಾರತಕ್ಕೆ ನೀರಿನ ಲಭ್ಯತೆಯು ಅತ್ಯಂತ ನಿರ್ಣಾಯಕವಾಗಿದೆ” ಎಂದು ಮೋದಿ ಹೇಳಿದ್ದಾರೆ.
“ಅತ್ಯಂತ ಕಡಿಮೆ ಸಮಯದಲ್ಲಿ ಸುಮಾರು ನಾಲ್ಕು ಕೋಟಿ ಹೊಸ ಕುಟುಂಬಗಳು ನಲ್ಲಿ ನೀರಿನ ಸಂಪರ್ಕವನ್ನು ಪಡೆದಿವೆ. ಕೇವಲ ಒಂದೂವರೆ ವರ್ಷದ ಹಿಂದೆ 19 ಕೋಟಿ ಗ್ರಾಮೀಣ ಕುಟುಂಬಗಳ ಪೈಕಿ ಕೇವಲ 3.5 ಕೋಟಿ ಕುಟುಂಬಗಳು ನಲ್ಲಿ ನೀರು ಪಡೆಯುತ್ತಿದ್ದವು” ಎಂದಿದ್ದಾರೆ.
“ಭಾರತದ ಅಭಿವೃದ್ಧಿಯ ದೃಷ್ಟಿಕೋನವು ಮತ್ತು ಅದರ ಸ್ವಾವಲಂಬಿ ದೂರದೃಷ್ಟಿಯ ನೀರಿನ ಸಂಪರ್ಕದ ಮೇಲೆ ಅವಲಂಬಿತವಾಗಿದೆ. ಇದಕ್ಕಾಗಿ ನಮ್ಮ ಸರಕಾರ ಜಲ ಆಡಳಿತವನ್ನು ತನ್ನ ಪ್ರಮುಖ ಆದ್ಯತೆಯನ್ನಾಗಿ ಮಾಡಿಕೊಂಡಿದೆ. ಹೆಚ್ಚು ಮಳೆ ನೀರು ಸಂಗ್ರಹ ಎಂದರೆ ಅಂತರ್ಜಲದ ಮೇಲೆ ಕಡಿಮೆ ಅವಲಂಬನೆ ಎಂದು ಅರ್ಥ” ಎಂದು ಮೋದಿ ಹೇಳಿದ್ದಾರೆ.
ದೇಶದಲ್ಲಿ ನೀರಿನ ಸಂರಕ್ಷಣೆಯ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ವಿಶ್ವ ಜಲ ದಿನವನ್ನು ಆಚರಣೆ ಮಾಡಲಾಗುತ್ತಿರುವ ಸಂದರ್ಭದಲ್ಲಿ ಅಭಿಯಾನಕ್ಕೆ ಚಾಲನೆಯನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.