ಮಂಗಳೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಭಗತ್ ಸಿಂಗ್, ರಾಜ್ಗುರು, ಸುಖದೇವ್ ಅವರ ಬಲಿದಾನದ ದಿನದ ಸ್ಮರಣಾರ್ಥ ಪಂಜಿನ ಮೆರವಣಿಗೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಸಲಾಗುತ್ತಿದೆ.
ದಿನಾಂಕ 23 ಮಾರ್ಚ್ 2021 ರಂದು ಪಂಜಿನ ಮೆರವಣಿಗೆ ಕಾರ್ಯಕ್ರಮ ದಕ್ಷಿಣ ಕನ್ನಡದ ವಿವಿಧ ಕಡೆಗಳಲ್ಲಿ ನಡೆಯಲಿದೆ. ಸ್ವಾತಂತ್ರ್ಯಕ್ಕಾಗಿ ತಾಯಿ ಭಾರತಿಯ ಪಾದಕ್ಕೆ ತಮ್ಮ ಬದುಕನ್ನೇ ಸಮರ್ಪಿಸಿ ಕ್ರಾಂತಿಕಾರಿ ತ್ರಿವಳಿ ವೀರರ ಬಲಿದಾನವನ್ನು ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡುವ ಮೂಲಕ ನೆನಪಿಸಿಕೊಳ್ಳಲಾಗುತ್ತಿದೆ.
ಮೂಲ್ಕಿ ಮೂಡಬಿದ್ರೆ ಮಂಡಲ, ಮಂಗಳೂರು ಉತ್ತರ, ಸುಳ್ಯ ಮಂಡಲ, ಬಂಟ್ವಾಳ, ಮಂಗಳೂರು ನಗರ ದಕ್ಷಿಣ, ಪುತ್ತೂರು ನಗರ ಮತ್ತು ಗ್ರಾಮಾಂತರ ಮೊದಲಾದ ಮಂಡಲಗಳಲ್ಲಿ ಈ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿದೆ.
ರಾಜ್ಯದಾದ್ಯಂತ ಬಿಜೆಪಿ ಯುವ ಮೋರ್ಚಾ ವತಿಯಿಂದ ಪಂಜಿನ ಮೆರವಣಿಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಪಾಲ್ಗೊಳ್ಳುವಂತೆ ಯುವಮೋರ್ಚಾ ವಿನಂತಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.