ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ GetCETgo ಆನ್ಲೈನ್ ಪೋರ್ಟಲ್ ಸೇವೆಯನ್ನು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಗೆಟ್ ಸೆಟ್ ಗೋ ಮೂಲಕ ಕಲಿಕೆ, ಪರಿಷ್ಕರಣೆ, ಪರೀಕ್ಷೆ ಪರಿಕಲ್ಪನೆಯಲ್ಲಿ ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಅಧ್ಯಯನ ಸಾಮಗ್ರಿಗಳನ್ನು ಒದಗಿಸುವುದಕ್ಕೆ ಪೂರಕವಾಗಿ ಈ ಪೋರ್ಟಲ್ ಸಹಾಯ ಮಾಡಲಿದೆ. ಆ ಮೂಲಕ ಇಡೀ ದೇಶದಲ್ಲಿಯೇ ವಿದ್ಯಾರ್ಥಿಗಳಿಗಾಗಿ ಇಂತಹ ಉಪಕ್ರಮಗಳನ್ನು ಒಳಗೊಂಡ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೂ ಕರ್ನಾಟಕ ಪಾತ್ರವಾಗಿದೆ.
ವಿಬ್ಸೈಟ್, ಯೂಟ್ಯೂಬ್, ಗೆಟ್ಸೆಟ್ಗೋ ಆಪ್ ಮೂಲಕ ಇದರಲ್ಲಿ ಕೋಚಿಂಗ್ ಸಾಧ್ಯವಿದೆ. www.getcetgo.in ವೆಬ್ಸೈಟ್ನಲ್ಲಿ ಈ ಆಪ್ ಆಂಡ್ರಾಯ್ಡ್ ಮತ್ತು ಐಒಎಸ್ನಲ್ಲಿಯೂ ಲಭ್ಯವಿದೆ. ಯಾವ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯ ಕಾರಣದಿಂದ, ಸಿಇಟಿ, ನೀಟ್, ಜೆಇಇ ಕೋಚಿಂಗ್ಗಳಿಂದ ವಂಚಿತರಾಗದಿರಲಿ ಎಂಬ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಡಾ ಕೆ ಸುಧಾಕರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ GetCETgo ಆನ್ಲೈನ್ ಪೋರ್ಟಲ್ ಸೇವೆಯನ್ನು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ @BSYBJP ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ @drashwathcn, ಪ್ರಾಥಮಿಕ ಶಿಕ್ಷಣ ಸಚಿವ @nimmasuresh, ಆರೋಗ್ಯ ಸಚಿವ @mla_sudhakar, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/NAZxGow3V1
— CM of Karnataka (@CMofKarnataka) March 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.