ಮುಂಬಯಿ: ಮಹಾರಾಷ್ಟ್ರದ ಪ್ರಸ್ತುತ ಪರಿಸ್ಥಿತಿ ಕುರಿತು ಮಹಾರಾಷ್ಟ್ರ ಬಿಜೆಪಿ ನಿಯೋಗ ಮಾರ್ಚ್ 24 ರಂದು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿ ಮಾಡಲಿದೆ ಎಂದು ಬಿಜೆಪಿ ಮುಖಂಡ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ.
“ಪ್ರಸ್ತುತ ಪರಿಸ್ಥಿತಿ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ರಾಜ್ಯಪಾಲರು ಈಗ ರಾಷ್ಟ್ರಪತಿಗೆ ವರದಿ ಕಳುಹಿಸುವುದು ಅವಶ್ಯಕ” ಎಂದು ಅವರು ಹೇಳಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿನ ಆರೋಪಗಳ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರ ಮೂಲಕ ಅಥವಾ ಸಿಬಿಐ ಮೂಲಕ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಪರಮ್ ಬಿರ್ ಸಿಂಗ್ ಶನಿವಾರ ಸಿಎಂಗೆ ಬರೆದ ತಮ್ಮ ಪತ್ರದಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ದುಷ್ಕೃತ್ಯದಲ್ಲಿ ತೊಡಗಿದ್ದಾರೆ ಮತ್ತು ಅಮಾನತುಗೊಂಡ ಎಪಿಐ ಸಚಿನ್ ವೇಜ್ ಅವರಿಗೆ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ಸೂಚಿಸುತ್ತಿದ್ದರು” ಎಂಬ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ದೇಶಮುಖ್ ಹೇಳಿದ ಒಂದು ದಿನದ ನಂತರ ಪರಮ್ ಬಿರ್ ಸಿಂಗ್ ಮಾಡಿದ ಆರೋಪಗಳು ಹೊರಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.