ಬೆಂಗಳೂರು: ಕೊರೋನಾ ಕಾರಣದಿಂದ ನಡೆಯುತ್ತಿರುವ ಆನ್ಲೈನ್ ಶಿಕ್ಷಣ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಹಿನ್ನೆಲೆಯಲ್ಲಿ ತಜ್ಞರ ಜೊತೆಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೂ ಆನ್ಲೈನ್ ಶಿಕ್ಷಣ ನಡೆಯುತ್ತಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಅಡ್ಡ ಪರಿಣಾಮವನ್ನುಂಟು ಮಾಡುತ್ತಿರುವ ಬಗ್ಗೆಯೂ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಜೊತೆಗೆ ಚರ್ಚೆ ನಡೆಸಿ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ನಿಯಮ ಮೀರಿ ಆನ್ಲೈನ್ ಶಿಕ್ಷಣ ನೀಡಲು ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಆನ್ಲೈನ್ ಶಿಕ್ಷಣ ಮಕ್ಕಳ ಹಕ್ಕು ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರ ತಜ್ಞರಿಂದ ಅಗತ್ಯ ಸಲಹೆ ಸೂಚನೆಗಳನ್ನು ಪಡೆದುಕೊಂಡು ಆನ್ಲೈನ್ ಶಿಕ್ಷಣ ನೀಡಲು ಅವಕಾಶ ನೀಡಿದೆ. ಅದರೊಂದಿಗೆ ಆನ್ಲೈನ್ ಶಿಕ್ಷಣಕ್ಕೆ ಸಮಯವನ್ನೂ ನಿಗದಿ ಮಾಡಿದೆ. ಈ ನಿಯಮ ಮೀರುವ ಶಾಲೆಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.