ಬೆಂಗಳೂರು: ರಾಜ್ಯದಲ್ಲಿ ಅವಧಿ ಮೀರಿದರೂ ಚುನಾವಣೆ ನಡೆಸದ ನಗರದ ಸ್ಥಳೀಯ ಸಂಸ್ಥೆಗಳ ಪಟ್ಟಿಯನ್ನು ಸಲ್ಲಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಅವಧಿ ಮುಗಿದರೂ ಚುನಾವಣೆ ನಡೆಸದೇ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂಬಂಧ ಸುಪ್ರೀಂ ಕೋರ್ಟ್ ಮತ್ತು ಹೈ ಕೋರ್ಟ್ ಗಳ ಮುಂದೆ ಬಾಕಿ ಇರುವ ಪ್ರಕರಣಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.
4 ಮಹಾನಗರ ಪಾಲಿಕೆ, 10 ನಗರಸಭೆ, 6 ಪುರಸಭೆ, 2 ಪಟ್ಟಣ ಪಂಚಾಯತ್ಗಳ ಅವಧಿ ಮುಗಿದಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ಸ್ವಯಂಪ್ರೇರಿತ ಅರ್ಜಿಯನ್ನು ಕೋರ್ಟ್ ದಾಖಲಿಸಿಕೊಂಡಿದೆ. ಸಂವಿಧಾನದಲ್ಲಿ ತಿಳಿಸಿರುವಂತೆ ಅವಧಿ ಮೀರುವ ಮೊದಲೇ ಕ್ಷೇತ್ರ ಮರುವಿಂಗಡಣೆಯ ಕಾರ್ಯಗಳನ್ನು ಮಾಡಿಕೊಳ್ಳಬೇಕು. ಅವಧಿ ಮುಗಿದ ಬಳಿಕ ಈ ಪ್ರಕ್ರಿಯೆ ಆರಂಭ ಮಾಡುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.