ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮತ್ತೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಶಾಲೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ನಡೆಸಿದ್ದು, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ರಾಜ್ಯದ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿದಂತೆ, ಶೈಕ್ಷಣಿಕ ಚಟುವಟಿಕೆ, ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ವಿದ್ಯಾರ್ಥಿಗಳ ಆರೋಗ್ಯದ ಕಾಳಜಿಯನ್ನು ವಹಿಸುವ ನಿಟ್ಟಿನಲ್ಲಿ ಶಾಲಾ, ಕಾಲೇಜುಗಳಲ್ಲಿ, ಹಾಸ್ಟೆಲ್ಗಳಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಿಗದಿಪಡಿಸಲಾಗಿರುವ ವೇಳಾಪಟ್ಟಿಗೆ ಅನುಗುಣವಾಗಿಯೇ ಪರೀಕ್ಷೆಗಳು ನಡೆಯಲಿವೆ. ತರಗತಿಗಳನ್ನು ನಡೆಸುವ ವಿಷಯದಲ್ಲಿಯೂ ಯಾವುದೇ ಬದಲಾವಣೆಗಳಿಲ್ಲ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಅಡುವಂತೆಯೂ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳಿಗೂ ಆದೇಶಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳೂ ಈ ಕ್ರಮವನ್ನು ಪಅಲನೆ ಮಅಡುವಂತೆ ಸೂಚಿಸಲಾಗಿದೆ. ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿದಂತೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂಬುದಾಗಿಯೂ ಅವರು ಹೇಳಿದ್ದಾರೆ.
ಈ ಸಭೆಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಡಿಸಿಎಂ ತಿಳಿಸಿದ್ದಾರೆ.
📢
ಎಲ್ಲಾ ವಿದ್ಯಾರ್ಥಿ ಮಿತ್ರರ ಗಮನಕ್ಕೆ –
*️⃣ ಮುಖ್ಯಮಂತ್ರಿ @BSYBJP ಅವರ ನೇತೃತ್ವದಲ್ಲಿ ನಡೆದ ಸಭೆ ಕುರಿತು ಕೆಲವು ಅಂಶಗಳು.
*️⃣ ಶೈಕ್ಷಣಿಕ ಚಟುವಟಿಕೆ, ವೇಳಾಪಟ್ಟಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ.
*️⃣ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಶೈಕ್ಷಣಿಕ ಹಿತರಕ್ಷಣೆಗಾಗಿ ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮ. pic.twitter.com/2FkgQD4M3v
— Dr. Ashwathnarayan C. N. (@drashwathcn) March 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.