ಬೆಂಗಳೂರು: ಮಾರ್ಚ್ 31 ರೊಳಗಾಗಿ ಖಾಸಗಿ ಮತ್ತು ಅನುದಾನರಹಿತ ಶಾಲೆಗಳ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಖಾಸಗಿ, ಅನುದಾನರಹಿತ ಶಾಲೆಗಳ ಜೊತೆಗೆ ನಡೆದ ಸಭೆ ಯಶಸ್ವಿಯಾಗಿದೆ. ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, ರಾಜ್ಯದ ಕೆಲವು ಖಾಸಗಿ ಶಾಲೆಗಳು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ಅವುಗಳನ್ನು ಈಡೇರಿಸದೇ ಹೋದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಖಾಸಗಿ, ಅನುದಾನ ರಹಿತ ಶಾಲೆಗಳಿಗೆ ಸಂಬಂಧಪಟ್ಟವರನ್ನು ಮಾತುಕತೆಗೆ ಆಹ್ವಾನಿಸಿತ್ತು. ಸಭೆಯಲ್ಲಿಯೂ ಅವರ ಬೇಡಿಕೆಗಳ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರು ಸರ್ಕಾರದ ಗಮನಕ್ಕೆ ತಂದಿರುವ ಹಲವು ಬೇಡಿಕೆಗಳಲ್ಲಿ ಕೆಲವನ್ನು ಈಡೇರಿಸುವುದಾಗಿ ಸರ್ಕಾರ ಹೇಳಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.