ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದೊಂದೇ ಪರಿಹಾರ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಹಾಗೂ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಸಿ . ಎನ್ ಮಂಜುನಾಥ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳ ನಿಯಂತ್ರಣ ಹಾಗೂ ಸಾರ್ವಜನಿಕರು ಕೈಗೊಳ್ಳಬಹುದಾದ ಅಗತ್ಯ ಕ್ರಮಗಳ ಕುರಿತು ಡಿಡಿ ನ್ಯೂಸ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು, ಫ್ರಾನ್ಸ್ , ಸ್ಪೇನ್, ಇಟಲಿ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕಿನ ಎರಡನೆ ಅಲೆ ತೀವ್ರ ಪರಿಣಾಮ ಬೀರಿದೆ. ಪ್ರಸ್ತುತ ರಾಜ್ಯದಲ್ಲಿಯೂ ಕೊರೋನಾ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, 2ನೇ ಅಲೆಯ ಪ್ರಭಾವ ಆರಂಭವಾಗಿದೆ ಎಂದರು.
ಕೊರೋನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಗದಿತ ಮಾರ್ಗಸೂಚಿಗಳನ್ನು ಸಂದರ್ಭನುಸಾರ ನೀಡುತ್ತಿದ್ದು, ಅವುಗಳ ಸಮರ್ಪಕ ಪಾಲನೆ ಅತ್ಯಗತ್ಯವಾಗಿದೆ. ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅವಶ್ಯವಾಗಿದೆ. ಅನಾವಶ್ಯಕವಾಗಿ ಗುಂಪು ಸೇರದೇ ಇರುವುದು, ಮುಖಗವಸು ಧರಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಕೊರೋನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.