ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಲವಣಾಂಶ ರಹಿತ ಮರಳು ಪೂರೈಕೆಗೆ ಕ್ರಮ ಕೈಗೊಳ್ಳಲಾಗವುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಉಪ್ಪಿನ ಅಂಸವಿರುವ ಮರಳಿನ ಗುಣಮಟ್ಟ ಕಡಿಮೆ ಇರುತ್ತದೆ. ಈ ಸಂಬಂಧ ಸಮಿತಿ ವರದಿ ನೀಡಿದ್ದು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಅರಣ್ಯ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಇಲಾಖೆಗಳ ನೇತೃತ್ವದಲ್ಲಿ ಈ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಲವಣ ಮಿಶ್ರಿತ ಮರಳು ಪೂರೈಕೆಯನ್ನು ನಿಲ್ಲಿಸಲಾಗಿದ್ದು, ಯಾರಾದರೂ ಪೂರೈಕೆ ಮಾಡುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ನದಿಯ ನೀರು ಸಮುದ್ರ ಸೇರುವ ಪ್ರದೇಶದಿಂದ ಮರಳು ಸಂಗ್ರಹ ಮಾಡಲಾಗುತ್ತಿದೆ. ಅದರ ಗುಣಮಟ್ಟ ಪರಿಶೀಲಿಸಿ ಪೂರೈಕೆ ಮಾಡಲಾಗುತ್ತಿದೆ. ಇದಕ್ಕಾಗಿ ಮರಳು ಬ್ಲಾಕ್ಗಳನ್ನು ಸಹ ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿಯಮ ಮೀರಿ ಮರಳು ಸಾಗಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿರಾಣಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.