ಬೆಂಗಳೂರು: ನಮ್ಮ ಸರ್ಕಾರ ಸಾಲ ಮಾಡಿ ತುಪ್ಪ ತಿಂದಿಲ್ಲ. ಮೋಜು ಮಾಡಲು ಸಾಲದ ಹಣ ಬಳಕೆ ಮಾಡಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಸಮೃದ್ಧ ಪರಿಸ್ಥಿತಿಯಲ್ಲಿ ತಮ್ಮ ಆಡಳಿತದ ಸರ್ಕಾರಗಳೇ ಆಳ್ವಿಕೆ ನಡೆಸುತ್ತಿದ್ದರೂ ಸಾಲ ಮಾಡಿದವರಿದ್ದಾರೆ. ಪ್ರಸ್ತುತ ನಮ್ಮ ಸರ್ಕಾರ ಆಡಳಿತದಲ್ಲಿದೆ. ಈ ಅವಧಿಯಲ್ಲಿ ಕಂಡು ಕೇಳರಿಯದ ಮಹಾಮಾರಿ ಕೊರೋನಾ ಸೋಂಕು, ಮಳೆ, ಪ್ರವಾಹ, ನೆರೆ ಮೊದಲಾದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇದು ರಾಜ್ಯದ ಆರ್ಥಿಕತೆಯ ಮೇಲೆಯೂ ಅಡ್ಡ ಪರಿಣಾಮವನ್ನು ಉಂಟುಮಾಡಿತ್ತು. ಇಂತಹ ಸಂದರ್ಭದಲ್ಲಿ ಸಾಲ ಮಾಡದೆಯೇ ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಸಾಧ್ಯವಿದೆಯೇ? ಎಂದು ಅವರು ಹೇಳಿದ್ದಾರೆ.
ಕೊರೋನಾ ಸಾಂಕ್ರಾಮಿಕ ಇಡೀ ಜಗತ್ತಿಗೇ ವಕ್ಕರಿಸಿದೆ. ಈ ಸಂದರ್ಭದಲ್ಲಿ ರಾಜ್ಯವೂ ಇದರಿಂದ ಹಲವು ಸಂಕಷ್ಟಗಳನ್ನು ಅನುಭವಿಸಿದೆ. ಈ ಸಂದರ್ಭದಲ್ಲಿ ತಕ್ಷಣದ ಪರಿಹಾರ ನೀಡಲು ಸರ್ಕಾರದ ಬಳಿ ಯಾವುದೇ ಮಂತ್ರದಂಡವಿಲ್ಲ. ಸರ್ಕಾರದ ಬೊಕ್ಕಸ ಅಕ್ಷಯಪಾತ್ರೆಯಲ್ಲ. ಇದು ಎಲ್ಲರಿಗೂ ತಿಳಿದಿರುವ ವಿಚಾರವೇ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.