ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ಸಂದರ್ಭದಲ್ಲಿ ದೇಶದ ಆರ್ಥಿಕತೆಯನ್ನು ಮೇಲೆತ್ತಲು ತಂದ ಆತ್ಮನಿರ್ಭರ ಯೋಜನೆಯಡಿ, ದೇಶದ ಪ್ರಗತಿಗೆ ಪೂರಕ ವಾತವರಣ ನಿರ್ಮಾಣವಾಗುತ್ತಿದೆ. ಇದಕ್ಕೆ ಅನುಗುಣವಾಗಿ ಭಾರತೀಯ ಸೇನೆಯು ಲೈಟ್ ಯುಟಿಲಿಟಿ ಹೆಲಿಕಾಫ್ಟರ್ಗಳನ್ನು (ಎಲ್ಯುಎಚ್) ಸಶಸ್ತ್ರ ಪಡೆಗಳಿಗೆ ಒದಗಿಸುವ ಮೂಲಕ ಆತ್ಮನಿರ್ಭರ್ ಭಾರತ್ ಯೋಜನೆಯನ್ನು ಉತ್ತೇಜಿಸುತ್ತಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ.
ದೇಶಿಯವಾಗಿ ಅಭಿವೃದ್ಧಿಪಡಿಸುತ್ತಿರುವ ಹೊಸ ವಿಮಾನಗಳು, ಶಸ್ತ್ರಾಸ್ತ್ರಗಳನ್ನು ಸೇನೆಗೆ ಒದಗಿಸಿಕೊಡುವುದು ನಿರಂತರವಾದ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕೇಳಿದ ಪ್ರಶ್ನೆಗೆ ರಕ್ಷಣಾ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು ಲಿಖಿತ ಉತ್ತರ ನೀಡಿದ್ದಾರೆ.
2021 ರ ಫೆಬ್ರವರಿಯವರೆಗೆ ರಕ್ಷಣಾ ಕ್ಷೇತ್ರದಲ್ಲಿ ವಿವಿಧ ರಕ್ಷಣಾ ಉಪಕರಣಗಳನ್ನು ಉತ್ಪಾದಿಸಲು ಸರ್ಕಾರವು ಈಗಾಗಲೇ ಒಟ್ಟು 523 ಕೈಗಾರಿಕಾ ಪರವಾನಗಿಗಳನ್ನು ನೀಡಿದೆ ಎಂದು ಅವರು ಹೇಳಿದರು. ಸಶಸ್ತ್ರ ಪಡೆಗಳಲ್ಲಿ ಪ್ರಸ್ತುತ ದೇಶಿಯವಾಗಿ ಅಭಿವೃದ್ಧಿಪಡಿಸಲಾಗುವ ಯುದ್ಧ ವಿಮಾನಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.