ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಸೋಂಕು ಹೆಚ್ಚುತ್ತಿದ್ದು, ಈ ಸಂಬಂಧ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಹೊರಡಿಸಿದೆ.
ಕೊರೋನಾ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದ್ದು, ಹಲವು ಮಹತ್ವದ ಸೂಚನೆಗಳನ್ನು ನೀಡಿದೆ.
ಸಭೆ ಸಮಾರಂಭಗಳಿಗೆ ಸಂಬಂಧಿಸಿದಂತೆ ಒಳಾಂಗಣ ಮದುವೆ ಕಾರ್ಯಕ್ರಮಗಳಿಗೆ 200 ಮಂದಿ, ಹೊರಾಂಗಣ ಮದುವೆಗೆ 500 ಮಂದಿ, ಇತರ ಕಾರ್ಯಕ್ರಮಗಳಿಗೆ 100 ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಹೊರಾಂಗಣ ಅಂತ್ಯಕ್ರಿಯೆಗೆ 100 ಮಂದಿ ಸೇರಲು ಅವಕಾಶವಿದೆ. ಹೆಚ್ಚು ಜನ ಸೇರಿದಲ್ಲಿ ಆಯೋಜಕರಿಗೆ 10 ಸಾವಿರ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
ನಗರದಲ್ಲಿ ಮಾಸ್ಕ್ ಧರಿಸದಿದ್ದರೆ 250 ರೂ. ದಂಡ, ಪಾಲಿಕೆ ವ್ಯಾಪ್ತಿ ಹೊರಗೆ ಮಾಸ್ಕ್ ಧರಿಸದೇ ಇದ್ದಲ್ಲಿ 100 ರೂ. ದಂಡ ತೆರಬೇಕಾಗುತ್ತದೆ. ಮಾಸ್ಕ್ ಧರಿಸದೇ ಹೋದಲ್ಲಿ ದಂಡ ವಿಧಿಸುವಂತೆ ಪೊಲೀಸರಿಗೂ ಸರ್ಕಾರ ಸೂಚನೆ ನೀಡಿದೆ.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮತ್ತೆ ರಣಕೇಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನೂತನ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ₹250 ಹಾಗೂ ಇತರೆ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುವುದು.
1/2@DHFWKA pic.twitter.com/spxpLH4wt2
— Dr Sudhakar K (@mla_sudhakar) March 25, 2021
ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ ₹5,000 ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ ₹10,000 ದಂಡ ವಿಧಿಸಲಾಗುವುದು.
2/2@DHFWKA pic.twitter.com/ySXIAGNVDX
— Dr Sudhakar K (@mla_sudhakar) March 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.