ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿವೆ. ಈ ನಡುವೆ ಮಂದಿರದ ತಳಪಾಯ ನಿರ್ಮಾಣಕ್ಕಾಗಿ ಭೂಮಿ ಅಗೆಯುವ ಸಂದರ್ಭದಲ್ಲಿ 3 ಪುರಾತನ ಬಾವಿಗಳು ಪತ್ತೆಯಾಗಿವೆ. ಆ ಮೂಲಕ ಸುಪ್ರೀಂಕೋರ್ಟ್ ತೀರ್ಪು ನೀಡಿದಂತೆಯೇ ರಾಮ ಜನ್ಮಭೂಮಿ ರಾಮಲಲ್ಲಾನಿಗೇ ಸೇರಿದ್ದು ಎಂಬುದಕ್ಕೆ ಪುಷ್ಟಿ ನೀಡುವ ಅನೇಕ ವಿಚಾರಗಳು ಉತ್ಖನನದ ಸಂದರ್ಭದಲ್ಲಿ ಪತ್ತೆಯಾಗುತ್ತಿವೆ.
ಅಯೋಧ್ಯೆ ಶ್ರೀರಾಮನಿಗೇ ಸೇರಿದ್ದು ಎಂಬ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ ನಂತರದ ಕಳೆದೊಂದು ವರ್ಷಗಳಲ್ಲಿ ಮಂದಿರ ನಿರ್ಮಾಣಕ್ಕಾಗಿ ಭರದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮಣ್ಣಿನ ಧಾರಣಾ ಪರೀಕ್ಷೆಗಳನ್ನು ಸಹ ನಡೆಸಲಾಗಿದೆ. ಆ ಬಳಿಕ ಮಂದಿರ ನಿರ್ಮಾಣದ ಹಿನ್ನೆಲೆ ಭೂಮಿ ಅಗೆಯುವ ಕೆಲಸಗಳನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ಮೂರು ಬಾವಿಗಳು ಪತ್ತೆಯಾಗಿವೆ. ಬಾವಿ ಪತ್ತೆಯಾದ ಪ್ರದೇಶಗಳನ್ನು ಹೊರತು ಪಡಿಸಿದಂತೆ ಉಳಿದ ಪ್ರದೇಶಗಳಲ್ಲಿ ಸದ್ಯ ಕಾಮಗಾರಿ ನಡೆಸಲಾಗುತ್ತಿದೆ.
2020 ರ ಮಾರ್ಚ್ ತಿಂಗಳಿನಲ್ಲಿ ರಾಮ ಜನ್ಮಭೂಮಿ ಪ್ರದೇಶದಲ್ಲಿ ಮಣ್ಣು ಅಗೆಯುವ ಸಂದರ್ಭದಲ್ಲಿ ಭಗ್ನಗೊಂಡ ಅನೇಕ ಅವಶೇಷಗಳು ಪತ್ತೆಯಾಗಿದ್ದವು. ಮೂರ್ತಿಗಳು, ಸ್ತಂಭಗಳು ಸೇರಿದಂತೆ ಇನ್ನೂ ಹಲವು ವಸ್ತುಗಳು ಪತ್ತೆಯಾಗಿದ್ದವು. ಅವೆಲ್ಲವುಗಳನ್ನೂ ಸುರಕ್ಷಿತವಾಗಿ ಸಂರಕ್ಷಿಸಿಡಲಾಗಿದೆ. ಈ ಬಾವಿಗಳನ್ನೂ ಸಹ ಯಾವುದೇ ಹಾನಿಯಾಗದಂತೆ ಕಾಮಗಾರಿಯನ್ನು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ನಿರ್ಮಾಣದ ಜೊತೆ ಜೊತೆಗೆ ಉತ್ಖನನ ಕಾರ್ಯಗಳೂ ನಡೆಯುತ್ತಿದ್ದು, ಮತ್ತಷ್ಟು ಅವಶೇಷಗಳು ಪತ್ತೆಯಾಗುವ ಸಾಧ್ಯತೆ ಇರುವುದಾಗಿಯೂ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.