ಮಂಗಳೂರು: ಜಲ್ಲಿಕಲ್ಲು, ಶಿಲೆಕಲ್ಲುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಅವಕಾಶ ಕಲ್ಪಿಸಿಕೊಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಶಾಸಕ ರಘುಪತಿ ಭಟ್ ಅವರ ನೇತೃತ್ವದಲ್ಲಿ ಕರಾವಳಿಯ ಕ್ವಾರಿ ಮಾಲಕರು, ಕ್ರಷರ್ ಮಾಲಕರು, ಕಟ್ಟಡ ಸಾಮಗ್ರಿ, ಟೆಂಪೋ ಲಾರಿ ಮಾಲಕರ ಸಂಘಗಳ ಪದಾಧಿಕಾರಿಗಳ ನಿಯೋಗ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಲ್ಲಿಕಲ್ಲು ಮತ್ತು ಶಿಲೆಕಲ್ಲುಗಳ ಸಾಗಾಟಕ್ಕೆ ಅವಕಾಶ ನೀಡುವಂತೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.
ಜಿಲೆಗಳಲ್ಲಿ ಜಲ್ಲಿಕಲ್ಲುಗಳ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಹಲವಾರು ಕಾಮಗಾರಿಗಳು ಅಪೂರ್ಣವಾಗಿವೆ. ಜನಸಾಮಾನ್ಯರು ಸಹ ಇದರಿಂದ ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಇವುಗಳ ಸಾಗಾಟಕ್ಕೆ ಸರ್ಕಾರ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಸಚಿವರಿಗೆ ಮನವಿಯನ್ನು ಸಲ್ಲಿಸಿದೆ.
ಈ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವ ಅವಕಾಶವನ್ನೂ ಇದೇ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ ಅವರು ಒದಗಿಸಿ ಕೊಟ್ಟಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.