ಮೈಸೂರು: ಕಾವೇರಿ ಕೂಗು ಅಭಿಯಾನದಡಿಯಲ್ಲಿ ರೈತರ ಜಮೀನಿನಲ್ಲಿ ಈಗಾಗಲೇ 1.10 ಕೋಟಿ ಗಳಷ್ಟು ಸಸಿಗಳನ್ನು ನೆಡಲಾಗಿದೆ ಎಂದು ಈಶಾ ಪ್ರತಿಷ್ಠಾನದ ಅಧ್ಯಕ್ಷ ಜಗ್ಗಿ ವಾಸುದೇವ್ ಅವರು ತಿಳಿಸಿದ್ದಾರೆ.
ಕಾವೇರಿ ಕೂಗು ಅಭಿಯಾನದಲ್ಲಿ ಸ್ವಯಂಸೇವಕರು, ರೈತರು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಸಸಿ ನೆಡುವ ಕಾರ್ಯವೂ ನಡೆಯುತ್ತಿದೆ. ಮುಂದಿನ ವರ್ಷದಲ್ಲಿ 3.50 ಕೋಟಿಗಳಷ್ಟು ಸಸಿಗಳನ್ನು ನೆಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದನ್ನು ಕಾರ್ಯರೂಪಕ್ಕೂ ತರಲಾಗುವುದು. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸುವಂತೆಯೂ ಅವರು ಮನವಿ ಮಾಡಿದ್ದಾರೆ.
ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಅವರ ಜೊತೆಗೆ ಕಾವೇರಿ ಕೂಗು ಯೋಜನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿರುವುದಾಗಿಯೂ ಜಗ್ಗಿ ವಾಸುದೇವ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.