ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕಠಿಣ, ನೂತನ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಅಥವಾ ಅಂಕೆ ಮೀರಿದಲ್ಲಿ ರಾಜ್ಯಕ್ಕೆ ಅಪಾಯ ಕಾದಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರ ಮತ್ತು ಕ್ವಾರಂಟೈನ್ಗೆ ಒಳಗಾದವರ ಕೈಗೆ ಸೀಲ್ ಹಾಕುವ ಮೂಲಕ ಮಾರ್ಕ್ ಮಾಡುವುದಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ರಾಜ್ಯದಲ್ಲಿ 20 ರಿಂದ 40 ವರ್ಷದೊಳಗಿನ ಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರು ಸಾರ್ವಜನಿಕವಾಗಿ ಓಡಾಟ ನಡೆಸುವ ಮೂಲಕ ಸೋಂಕು ವ್ಯಾಪಿಸುವುದಕ್ಕೆ ಕಾರಣರಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕಳೆದ ಬಾರಿಯಂತೆಯೇ ಕೈಗೆ ಸೀಲ್ ಮಾಡಲಾಗುವುದು ಎಂದು ಸೂಚಿಸಿದೆ. ಕೊರೋನಾ ಕಂಟಕದಲ್ಲಿ ರಾಜ್ಯದಲ್ಲಿಯೇ ದೇಶ 7 ಸ್ಥಾನದಲ್ಲಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದ ದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಹಾಗೆಯೇ ಹೊರ ರಾಜ್ಯದಿಂದ ರಾಜ್ಯದೊಳಕ್ಕೆ ಆಗಮಿಸುವ ಜನರಿಗೆ ಕೊರೋನಾ ನೆಗೆಟಿವ್ ವರದಿಯೂ ಕಡ್ಡಾಯ ಎಂದು ಅವರು ಹೇಳಿದ್ದಾರೆ. ಹಾಗೆಯೇ ಸಾರ್ವಜನಿಕರೂ ಸಹ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಸಚಿವರು ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.