ಬೆಂಗಳೂರು: ಕರ್ನಾಟಕವು ರಾಷ್ಟ್ರೀಯ ಪೋಷಣಾ ಅಭಿಯಾನದ ಅನುದಾನದ ಬಳಕೆ ಮತ್ತು ಒಟ್ಟು ಸಾಧನೆಗೆ ಸಂಬಂಧಿಸಿದಂತೆ ಇಡೀ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಮುಂದಿನ ತ್ರೈಮಾಸಿಕದ ಅವಧಿಯಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ.
ವರ್ಚುವಲ್ ಮೂಲಕ ಪೋಷಣಾ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಈ ಸೂಚನೆಯನ್ನು ನೀಡಿದ್ದಾರೆ.
ಪೋಷಣೆ ಟ್ರ್ಯಾಕ್ಟರ್ ಅಳವಡಿಕೆ, ಸಮುದಾಯ ಆಧರಿತ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆಯೂ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಮಸ್ಯೆಗಳ ಬಗ್ಗೆ ಲಿಖಿತವಾಗಿ ಮಾಹತಿ ನೀಡಿದಲ್ಲಿ ಸಂಬಂಧಿಸಿದ ಸಂಸ್ಥೆಗಳ ಜೊತೆಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನೂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.