ಬೆಂಗಳೂರು: ಭದ್ರಾ ಮೇಲ್ದಂಡೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್ ಮೆಂಟ್ ಸಮಿತಿಯ ಅನುಮೋದನೆ ದೊರೆತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಭದ್ರಾ ಮೇಲ್ದಂಡೆ ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ದೊರಕಿಸಿ ಕೊಟ್ಟ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿಗಳು ನಾಡಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಯೋಜನೆ ರಾಷ್ಟ್ರೀಯ ಸ್ಥಾನಮಾನವನ್ನು ಪಡೆದ ರಾಜ್ಯದ ಮೊದಲ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಯೋಜನೆ ಮುಖಾಂತರ ಮೊದಲ ಹಂತದಲ್ಲಿ ತುಂಗಾ ನದಿಯಿಂದ ಭದ್ರಾಕ್ಕೆ, 2 ನೇ ಹಂತದಲ್ಲಿ ಭದ್ರಾದಿಂದ ತುಂಗಭದ್ರಾ ಪ್ರದೇಶಕ್ಕೆ ಕಾಲುವೆ ಮೂಲಕ ನೀರು ಹರಿಸಲಾಗುತ್ತದೆ.
ಭದ್ರಾ ಮೇಲ್ದಂಡೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್ ಮೆಂಟ್ ಸಮಿತಿಯ ಅನುಮೋದನೆ ದೊರೆತಿದ್ದು, ಮುಖ್ಯಮಂತ್ರಿ @BSYBJP ರವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (1/2)
— CM of Karnataka (@CMofKarnataka) March 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.