ನವದೆಹಲಿ: ಕೇಂದ್ರ ಸರ್ಕಾರವು ಯೋಗಾಸಾನವನ್ನು ಸ್ಪರ್ಧಾತ್ಮಕ ಕ್ರೀಡೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಮುಂದಿಡುತ್ತಿದೆ. 2021 ರಲ ಖೇಲೋ ಇಂಡಿಯಾ ಯೂತ್ ಗೇಮ್ಸ್ನಲ್ಲಿ ಪುರುಷ ಮತ್ತು ಸ್ತ್ರೀ ವಿಭಾಗಗಳು ಯೋಗಾಸನ ಕ್ರೀಡೆಗಳನ್ನು ಒಳಗೊಂಡಿರುತ್ತದೆ.
ಅಲ್ಲದೆ ಮೋದಿ ಸರ್ಕಾರವು ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟವನ್ನು (ಎನ್ವೈಎಸ್ಎಫ್) ರಾಷ್ಟ್ರೀಯ ಕ್ರೀಡಾ ಒಕ್ಕೂಟವೆಂದು ಗುರುತಿಸಿದೆ.
ಈ ಮಾಹಿತಿಯನ್ನು ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಕಿರೆನ್ ರಿಜಿಜು ನೀಡಿದ್ದಾರೆ.
ಸರ್ಕಾರದ ಮಾನ್ಯತೆಯು ಎನ್ವೈಎಸ್ಎಫ್ ಅನ್ನು ಎಲ್ಲಾ ವಿಭಾಗಗಳಲ್ಲಿ ರಾಷ್ಟ್ರೀಯ ಚಾಂಪಿಯನ್ಶಿಪ್ಗಳನ್ನು ನಡೆಸಲು ಹಣಕಾಸಿನ ನೆರವು ಪಡೆಯಲು ಅರ್ಹವನ್ನಾಗಿ ಮಾಡುತ್ತದೆ. ಹಿರಿಯ, ಕಿರಿಯ ಮತ್ತು ಉಪ ಕಿರಿಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುತ್ತದೆ.
ಸರ್ಕಾರದ ಮಾನ್ಯತೆಯ ನಂತರ, ಯೋಗಾಸನ ಪ್ರಚಾರ ಮತ್ತು ಅಭಿವೃದ್ಧಿಗೆ, ವಾರ್ಷಿಕ ಚಾಂಪಿಯನ್ಶಿಪ್ಗಳನ್ನು ನಡೆಸಲು ಮತ್ತು ಯೋಗಾಸನ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಮತ್ತು ತಂಡಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳುವುದು ಇದರ ಮುಖ್ಯ ಜವಾಬ್ದಾರಿಯಾಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.