ನವದೆಹಲಿ: 22 ನೇ ಎಂಟರ್ಪ್ರಿನರ್ ಆಫ್ ದಿ ಇಯರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ಭಾರತದ ಉದ್ಯಮಿ ಮುಖೇಶ್ ಅಂಬಾನಿ ಅವರು ಸಣ್ಣ, ಮಧ್ಯಮ ಮತ್ತು ಬೃಹತ್ ಉದ್ಯಮಗಳು ಜನರ ಜೀವನ ಅವಶ್ಯಕತೆಗಳನ್ನು ಪೂರೈಸಲು ಅವಕಾಶಗಳನ್ನು ಹೊಂದಿದೆ ಎಂದು ಹೇಳಿದರು.
ದೇಶದ ಉದ್ಯಮಗಳು, ಕೈಗಾರಿಕಾ ವಲಯಗಳಲ್ಲಿ ಅಪೂರ್ವ ಸಾಧನೆಯನ್ನು ಮೆರೆದು ದೇಶ ವಿಶ್ವದಲ್ಲೇ ಹೆಸರು ಪಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಭಾರತದ ಸಾಮರ್ಥ್ಯ ಇನ್ನಷ್ಟು ವೃದ್ಧಿಗೊಂಡು ವಿಶ್ವದ ಪ್ರಮುಖ ಮೂರನೇ ಆರ್ಥಿಕತೆಗಳಲ್ಲಿಯೂ ಸ್ಥಾನ ಪಡೆಯಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತೀಯ ಉದ್ಯಮಿಗಳು ಈಗ ನಮ್ಮ ಮಾರುಕಟ್ಟೆಯ ಅಗತ್ಯಗಳನ್ನು ಹೆಚ್ಚು ಸ್ಪರ್ಧಾತ್ಮಕ ವೆಚ್ಚದಲ್ಲಿ ಪೂರೈಸುವ, ವಿಶ್ವದ ವಿವಿಧ ಪ್ರಸಿದ್ಧ ಬ್ರಾಂಡ್ಗಳನ್ನು ಸೋಲಿಸುವ ಗುಣಮಟ್ಟವನ್ನು ಒದಗಿಸುವ ಸಾಮರ್ಥ್ಯ ಹೊಂದಿದ್ದಾರೆ. ಇದು ಭಾರತೀಯ ಉದ್ಯಮಿಗಳಿಗೆ ಸಂಪೂರ್ಣ ಜಾಗತಿಕ ಮಾರುಕಟ್ಟೆಯನ್ನು ತೆರೆಯುತ್ತದೆ. ಆದ್ದರಿಂದ, ಭಾರತೀಯ ಉದ್ಯಮಿಗಳು ದೇಶೀಯ ಮಾರುಕಟ್ಟೆಗಳಿಗೆ ಮತ್ತು ಜಾಗತಿಕ ಮಾರುಕಟ್ಟೆಗಳಿಗೆ ಸೇವೆ ಒದಗಿಸಲು ಅವಕಾಶಗಳನ್ನು ಹೊಂದಿದ್ದಾರೆ. ಭಾರತದ ಸಾಮರ್ಥ್ಯ ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರೆಯುವತ್ತ ಸಾಗುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.