ಬೆಂಗಳೂರು: ರಾಜ್ಯದಲ್ಲಿನ ಕೊಳಚೆ ಪ್ರದೇಶಗಳು ಮತ್ತು ಜನದಟ್ಟಣೆ ಅಧಿಕವಾಗಿರುವ ಪ್ರದೇಶಗಳಲ್ಲಿ ಕೊರೋನಾ ವೈರಸ್ ವ್ಯಾಪಿಸದಂತೆ ತಡೆಯಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ನಿರ್ದೇಶನವನ್ನು ನೀಡಿದೆ.
ಈ ಅರ್ಜಿಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗಿದ್ದು, ಸದ್ಯ ಜನರಿಗೆ ಕೊರೋನಾ ಲಸಿಕೆ ವಿತರಣೆ ಮಾಡುವುದು ಪ್ರಮುಖ ವಿಚಾರವಾಗಿದೆ. ರಾಜ್ಯದಲ್ಲಿರುವ ಕೊಳಚೆ ಪ್ರದೇಶಗಳಲ್ಲಿ ಹೆಚ್ಚಾಗಿ ನಿರ್ಮಾಣ ಕಾರ್ಮಿಕರೇ ವಾಸ ಮಾಡುತ್ತಿದ್ದಾರೆ. ಕೊರೋನಾಗೆ ಲಸಿಕೆ ಪಡೆಯುವುದು ಸದ್ಯದ ಅವಶ್ಯಕತೆಯಾಗಿದ್ದು, ಈ ನಿಟ್ಟಿನಲ್ಲಿ ಕೊಳಚೆ ಪ್ರದೇಶಗಳಲ್ಲಿನ ಜನರನ್ನು ಲಸಿಕೆ ಪಡೆಯುವಂತೆ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದಾಗಿ ತಿಳಿಸುವಂತೆ ಕೋರ್ಟ್ ಸೂಚಿಸಿದೆ.
ಮುಂದನ ವಿಚಾರಣೆಯ ಸಂದರ್ಭದಲ್ಲಿ ಈ ಸಂಬಂಧ ಸರ್ಕಾರ ವರದಿ ಸಲ್ಲಿಸಬೇಕು ಎಂಬುದಾಗಿಯೂ ವಿಭಾಗೀಯ ಪೀಠ ನಿರ್ದೇಶನವನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.