ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ ದಲ್ಲಿ ಶುಕ್ರವಾರ ಪಕ್ಷದ ರಾಜ್ಯ ಕಾರ್ಯಾಲಯ ಕಾರ್ಯಾದರ್ಶಿಗಳಾದ ಲೋಕೇಶ್ ಅಂಬೆಕಲ್ಲು ಮತ್ತು ಸಂಸದ ಭಗವಂತ್ ಖೂಬಾ ಅವರು, ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಶರಣು ಸಲಗಾರ್ ಅವರಿಗೆ ಬಿ ಫಾರಂ ವಿತರಿಸಿ ಶುಭಕೋರಿದರು.
ಪಕ್ಷದ ಕಾರ್ಯಾಲಯಕ್ಕೆ ಆಗಮಿಸಿದ ಶರಣು ಸಲಗಾರ್ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾರಂಜೆ ಸಹಕಾರಿ ಸಕ್ಕರೆ ಕಾರ್ಖಾನೆಯ ಚೇರ್ಮ್ಯಾನ್ ಡಿ.ಕೆ. ಸಿದ್ರಾಮ್, ಮಂಡಲ ಅಧ್ಯಕ್ಷ ಅಶೋಕ್ ವಕಾರೆ, ಇತರ ಗಣ್ಯರು ಇದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್ ಅವರಿಗೆ ಅವರ ಆಪ್ತರ ಮುಖಾಂತರ ಬಿ ಫಾರಂ ಕಳುಹಿಸಿಕೊಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.